ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ ಸಿಂಗ್‌ ಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರ ಕಸ್ಟಡಿ ಇನ್ನು ಮುಂದೆ ಅಗತ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ಜಾಮೀನು ನೀಡಿದೆ.
ವಿಚಾರಣೆಯ ಬಾಕಿ ಇರುವಂತೆ ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ, ದೀಪಂಕರ ದತ್ತಾ ಮತ್ತು ಪ್ರಸನ್ನ ಬಿ. ವರಾಳೆ ಅವರಿದ್ದ ಪೀಠ ಆದೇಶಿಸಿದೆ.
ಸಂಜಯ ಸಿಂಗ್‌ ಅವರನ್ನು ಇನ್ನೂ ಕಸ್ಟಡಿಯಲ್ಲಿರಿಸಿಕೊಳ್ಳುವ ಅಗತ್ಯವಿದೆಯೇ ಎಂಬ ಬಗ್ಗೆ ಇ.ಡಿ.ಯಿಂದ ಮಾಹಿತಿ ಪಡೆಯುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌.ವಿ. ರಾಜು ಅವರಿಗೆ ಭೋಜನ ವಿರಾಮದ ಮೊದಲು ನ್ಯಾಯಾಲಯ ಸೂಚಿಸಿತು.

ಸಂಜಯ ಸಿಂಗ್‌ ಬಿಡುಗಡೆಗೆ ಇ.ಡಿ. ಒಪ್ಪಿದೆ. ಹೀಗಾಗಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬಹುದು ಎಂದು ಎಸ್‌.ವಿ.ರಾಜು ಮಧ್ಯಾಹ್ನ ತಿಳಿಸಿದರು.ಈ ಹೇಳಿಕೆಯಿಂದಾಗಿ ಇ ಡಿ ಸಿಂಗ್‌ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ವಿನಾಯಿತಿ ತೋರಿತು.
ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಮಾರ್ಪಟ್ಟಿರುವ ಉದ್ಯಮಿ ದಿನೇಶ ಅರೋರಾ ಅವರು ತಮ್ಮ ಆರಂಭಿಕ ಹೇಳಿಕೆಗಳಲ್ಲಿ ಸಿಂಗ್ ಅವರನ್ನು ಹೆಸರಿಸಿರಲಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಬಿಆರ್‌ಎಸ್‌ ನಾಯಕಿ ಕೆ ಕವಿತಾ, ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ಎಎಪಿ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರನ್ನೂ ಇ ಡಿ ಬಂಧಿಸಿದೆ. ಅವರೆಲ್ಲರೂ ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಮುಖ ಸುದ್ದಿ :-   ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement