ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಭಾನುವಾರ ಏಪ್ರಿಲ್ 7ರಂದು ಬೆಳಿಗ್ಗೆ 9:30 ಕ್ಕೆ ಮಹಿಳಾ ಅಭ್ಯರ್ಥಿಗಳಿಗೆ ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಾಗಿ ಬೈಸೇಫ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಜೆ.ಒ.ಸಿ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಬಯೊಡೇಟಾ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್, ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಆಸಕ್ತರು 9845288000, 9738564415 ಅಥವಾ 0836-2460886 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ