ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಇಂಡಿ: ಆಟ ಆಡುವಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಪುಟಾಣಿ

ವಿಜಯಪುರ : ಎರಡು ವರ್ಷದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಸತೀಶ ಮತ್ತು ಪೂಜಾ ದಂಪತಿಯ ಮಗ ಸಾತ್ವಿಕ ಮುಜಗೊಂಡ ಎಂಬ ಎರಡು ವರ್ಷದ ಬಾಲಕ ಆಟವಾಡಲು ಹೋಗಿದ್ದ ವೇಳೆ ಕೊಳವೆ ಬಾವಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಸಾತ್ವಿಕ ಬುಧವಾರ (ಏಪ್ರಿಲ್ 03) ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಆಕಸ್ಮಾತ್‌ ಆಗಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ವಿಷಯ ತಿಳಿದ ನಂತರ ಸ್ಥಳಕ್ಕೆ ತಾಲೂಕು ಆಡಳಿತಾಧಿರಿಗಳು, ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿ ಶಾಮಕ ದಳ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ಮಂಗಳವಾರ (ಏಪ್ರಿಲ್ -02) ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಎಂಬವರು ಸುಮಾರು 500 ಅಡಿ ಆಳದ ಬೋರ್​ವೆಲ್ ಕೊರೆಸಿದ್ದರು. ಆದರೆ ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದರು ಎನ್ನಲಾಗಿದೆ. ಮಾರನೆಯ ದಿನ ಶಂಕರಪ್ಪ ಮುಜಗೊಂಡ ಅವರ ಮೊಮ್ಮಗ ಸಾತ್ವಿಕ ಆಟವಾಡುತ್ತಿದ್ದಾಗ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದ್ದು, ಆತನಿಗೆ ಪೈಪ್‌ ಮೂಲಕ ಆಮ್ಲಜನಕದ​​ ವ್ಯವಸ್ಥೆ ಮಾಡಲಾಗಿದೆ. ಕೊಳವೆ ಬಾವಿಗೆ ಸಮಾನಾಂತರವಾಗಿ ಪಕ್ಕದಲ್ಲೇ ಜೆಸಿಬಿ ಮೂಲಕ ಮಣ್ಣನ್ನು ತೆಗೆದು ಬಾಲಕನ ರಕ್ಷಣೆ ಮಾಡುವ ಕಾರ್ಯ ನಡೆದಿದೆ.
ಆತಿವಕನನ್ನು ಹೊರತೆಗೆಯುವ ಪ್ರಯತ್ನ ನಡೆದಿದೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಜೇನು ಹುಳುಗಳ ದಾಳಿಯಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ : ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement