ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ವಾಹನ ಡಿಕ್ಕಿ ; ಮೂವರು ಸಾವು

ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ ಸುಮಾರು 20 ಕುರಿಗಳು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
ಮಂಗಳವಾರ ಸಂಜೆ ಈ ಅಫಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41) ಮತ್ತು ಶಿವರಾಜ ಹೊಳೆಪ್ಪನವರ(22) ಎಂದು ಗುರುತಿಸಲಾಗಿದೆ.
ಬಾಗಲಕೋಟೆ ಕಡೆಯಿಂದ ಬೆಂಗಾವು ಜಿಲ್ಲೆ ಮೂಲಕ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement