ವಯನಾಡ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಆಗಮಿಸಿ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಬುಧವಾರ (ಏಪ್ರಿಲ್‌ ೩) ನಾಮಪತ್ರ ಸಲ್ಲಿಸಿದರು.
ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಸುವ ಮುನ್ನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್ ವರೆಗೆ ರೋಡ್ ಶೋ ನಡೆಸಿದರು.

ನಂತರ ಮಾತನಾಡಿದ ಅವರು, ವಯನಾಡ್ ನನ್ನ ಮನೆ ಇದ್ದಂತೆ, ಇಲ್ಲಿನ ಜನರೇ ನನ್ನ ಕುಟುಂಬ. ವಯನಾಡ್ ಜನತೆಯ ಅಚಲ ಬೆಂಬಲಕ್ಕಾಗಿ ಅವರಿಗೆ ಕೃತಜ್ಞನಾಗಿದ್ದೇನೆ. ನಾವು ‘ನ್ಯಾಯ’ದ ಹೊಸ ಯುಗಕ್ಕೆ ಕಾಲಿಡುತ್ತಿರುವಾಗ, ಪ್ರತಿಯೊಬ್ಬರಿಗೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುವ ನನ್ನ ಸಮರ್ಪಣೆ ಮನೋಭಾವವನ್ನು ಪುನರುಚ್ಚರಿಸಲು ಬಯಸುತ್ತೇನೆ” ಎಂದು ರಾಹುಲ್ ಗಾಂಧಿ ಹೇಳಿದರು.
ರಾಹುಲ್ ಗಾಂಧಿಯವರು ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದ 10,92,197 ಮತಗಳ ಪೈಕಿ 7,06,367 ಮತಗಳನ್ನು ಪಡೆದು ವಿಜಯ ಸಾಧಿಸಿದ್ದರು.

ಪ್ರಮುಖ ಸುದ್ದಿ :-   ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement