ಬೆಳಗಾವಿ: ನಡು ರಸ್ತೆಯಲ್ಲೇ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಳಗಾವಿ : ಕಾಂಗ್ರೆಸ್‌ ಮುಖಂಡರೊಬ್ಬರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳ (58) ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಣ್ಣಪ್ಪ ಅವರು ಖೀಳೆಗಾಂವ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಹಾಗೂ ಶಾಸಕ ಲಕ್ಷ್ಮಣ ಸವದಿ ಆಪ್ತರಾಗಿದ್ದರು. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿದ ಪರಿಣಾಮ ಭಾರಿ ಪ್ರಮಾಣದ ರಕ್ತಸ್ರಾವ ಉಂಟಾಗಿ ಅಣ್ಣಪ್ಪ ಬಸಣ್ಣ ನಿಂಬಾಳ ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸುಮಾರು ಆರರಿಂದ ಏಳು ಜನರ ಗುಂಪು ಅಣ್ಣಪ್ಪ ಬಸಪ್ಪ ನಿಂಬಾಳ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕ ಲಕ್ಷ್ಮಣ ಸವದಿ ಅವರ ಆಪ್ತರಾಗಿದ್ದಾರೆ. ಸ್ಥಳೀಯವಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಅಥಣಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಯಶ್‌ ನಟನೆಯ 'ಟಾಕ್ಸಿಕ್‌ʼ ಸಿನೆಮಾ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್‌ನಿಂದ ಸದ್ಯಕ್ಕೆ ರಿಲೀಫ್‌

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement