ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ : ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್​ ರೋಡ್​ಶೋ ನಡೆಸಿದ ಮಾಜಿ ಸಿಎಂ ಎಚ್​.ಡಿ.
ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌​, ಜೆಡಿಎಸ್​ ನಾಯಕ ಸಿ.ಎಸ್‌.ಪುಟ್ಟರಾಜು ಮೊದಲಾದವರು ಸಾಥ್​ ನೀಡಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಕುಮಾರಸ್ವಾಮಿ ಅವರು ಮಂಡ್ಯ ನಗರದ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಡಾ.ಅಂಬೇಡ್ಕರ, ಕಾವೇರಿ, ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಆಸ್ತಿ ವಿವರ ಘೋಷಣೆ..
ಎಚ್​.ಡಿ. ಕುಮಾರಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ಅಫಿಡೆವಿಟ್​ನಲ್ಲಿ ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. 217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದು, 102.23 ಕೋಟಿ ರೂ ಮೌಲ್ಯ ಚರಾಸ್ತಿ ಹಾಗೂ 114.98 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇರುವುದಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ಅಫಿಡೆವಿಟ್​ನಲ್ಲಿ ಘೋಷಿಸಿದ್ದಾರೆ. 2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಮಯಕ್ಕೆ ಹೋಲಿಸಿದರೆ ಕುಮಾರ ಸ್ವಾಮಿ ಆಸ್ತಿ ಮೌಲ್ಯದಲ್ಲಿ 50.07 ಕೋಟಿ ರೂ.ಗಳಷ್ಟು ಹೆಚ್ಚಳವಾಗಿದೆ.
ಅಲ್ಲದೆ, ಕುಮಾರಸ್ವಾಮಿ ಬಳಿ 47 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ, 9.62 ಲಕ್ಷ ರೂಪಾಯಿ ಮೌಲ್ಯದ 12.5ಕೆಜಿ ಬೆಳ್ಳಿ ಮತ್ತು 2.60 ಲಕ್ಷ ರೂ. ಮೌಲ್ಯದ 4 ಕ್ಯಾರೆಟ್ ವಜ್ರ ಹೊಂದಿದ್ದಾರ. ಪತ್ನಿ ಅನಿತಾ ಕುಮಾರಸ್ವಾಮಿ ಬಳಿ 2.41ಕೋಟಿ ರೂ. ಮೌಲ್ಯದ 3.8 ಕೆಜಿ ಚಿನ್ನಾಭರಣ, 13 ಲಕ್ಷ ರೂ. ಮೌಲ್ಯದ 17 ಕೆಜಿ ಬೆಳ್ಳಿ ಮತ್ತು 33 ಲಕ್ಷ ರೂ. ಮೌಲ್ಯದ 50 ಕ್ಯಾರೆಟ್ ವಜ್ರು ಇರುವುದಾಗಿ ಅಫಿಡೆವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ಕೋಟ್ಯಾಂತರ ರೂ. ಸಾಲ
ಇದೇ ವೇಳೆ ಕುಮಾರಸ್ವಾಮಿ ದಂಪತಿ ಕೋಟ್ಯಂತರ ರೂ.ಗಳ ಸಾಲ ಹೊಂದಿರುವುದಾಗಿ ಘೋಷಿಸಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿಯೇ ಹೆಚ್ಚು ಸಾಲ ಹೊಂದಿದ್ದಾರೆ. ಅನಿತಾ ಕುಮಾರಸ್ವಾಮಿ ಅವರಿಗೆ 63.05 ಕೋಟಿ ರೂಪಾಯಿ ಸಾಲವಿದೆ, ಎಚ್‌.ಡಿ. ಕುಮಾರಸ್ವಾಮಿ ಅವರಿಗೆ 19.12 ಕೋಟಿ ರೂಪಾಯಿ ಸಾಲ ಇದೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಹೆಸರಿನಲ್ಲಿ ಚರಾಸ್ತಿ ಮೌಲ್ಯ 10,71,26,254 ರೂ. ಇದೆ. ಹಾಗೂ ಪತ್ನಿ ಹೆಸರಿನಲ್ಲಿ ಚರಾಸ್ತಿ 90,32,28,973 ರೂ. ಇದೆ. ಕುಮಾರಸ್ವಾಮಿಗೆ 43,94,42100 ರೂ. ಮೌಲ್ಯದ ಸ್ಥಿರಾಸ್ತಿ ಇದೆ ಹಾಗೂ ಪತ್ನಿ ಹೆಸರಿನಲ್ಲಿ 64,07,73,530 ರೂ.ಗಳ ಮೌಲ್ಯದ ಸ್ಥಿರಾಸ್ತಿ ಇದೆ. ಹಿಂದು ಅವಿಭಕ್ತ ಕುಟುಂಬದ ಚರಾಸ್ತಿ ಆಸ್ತಿ 1.20ಕೋಟಿ ರೂ. ಇದೆ ಎಂದು ಅಫಿಡೆವಿಟ್​ನಲ್ಲಿ ತಿಳಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement