ಚಾಮರಾಜನಗರ : ಗುಂಡಲ್ ಜಲಾಶಯದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು

ಚಾಮರಾಜನಗರ : ಬಟ್ಟೆ ತೊಳೆಯಲು ಹೋಗಿದ್ದ ವೇಳೆ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಗುಂಡಲ್ ಜಲಾಶಯದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ.
ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಗೋಪಿನಾಥಂ ಗ್ರಾಮ ಪಂಚಾಯತ ವ್ಯಾಪ್ತಿಯ ಪುದೂರು ಗ್ರಾಮದ ನಿವಾಸಿ ಮೀನಾ (33), ಪವಿತ್ರ (13), ಕೀರ್ತಿ (12) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ ಗುಂಡಲ್ ಜಲಾಶಯಕ್ಕೆ ಮೂವರು ಬಟ್ಟೆ ತೊಳೆಯಲು ಹೋಗಿದ್ದರು.ಈ ವೇಳೆ ಮೀನಾ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ತಾಯಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದುದನ್ನು ಕಂಡ ಮಕ್ಕಳು ಅವರನ್ನು ರಕ್ಷಿಸಲು ಮುಂದಾಗಿದ್ದಾರೆ. ನಂತರ ನೀರಿನಿಂದ ಹೊರಗೆ ಬರಲು ಆಗದೇ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳದಲ್ಲಿದ್ದ ಮಗ ತಂದೆಗೆ ಹೇಳಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement