ಕಾರವಾರ: ಬಸ್‌ ಅಡ್ಡಗಟ್ಟಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ವ್ಯಕ್ತಿ

ಕಾರವಾರ: ತನಗೆ ಬಸ್ ಚಾಲಕ ಸೈಡ್ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಬೈಕ್ ಸವಾರನೊಬ್ಬ ಸಾರಿಗೆ ಬಸ್ ಅಡ್ಡಗಟ್ಟಿ ಬಸ್‌ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕನಿಗೆ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಶಿರವಾಡದ ಜಾಂಬಾ ಕ್ರಾಸ್ ಬಳಿ ನಡೆದಿದೆ.
ಸಾರಿಗೆ ಬಸ್‌ ಕಾರವಾರ ನಗರದಿಂದ ಸಿದ್ದರಕ್ಕೆ ಪ್ರಯಾಣಿಸುತ್ತಿತ್ತು. ಬಸ್ ಶಿರವಾಡಕ್ಕೆ ತಲುಪುತ್ತಿದ್ದಂತೆ ಹಿಂಬದಿಯಿಂದ ಬಂದ್ ಬೈಕ್ ಸವಾರನಿಗೆ ಬಸ್ ಚಾಲಕ ಸೈಡ್ ನೀಡಿಲ್ಲ ಎನ್ನುವ ಕಾರಣಕ್ಕೆ ಸಿಟ್ಟಿಗೆದ್ದ ಬೈಕ್‌ ಸವಾರ ಸಾರಿಗೆ ಬಸ್ ಮುಂದೆ ಬೈಕ್‌ ನಿಲ್ಲಿಸಿ ಬಸ್‌ ತಡೆದು ಕರ್ತವ್ಯದಲ್ಲಿದ್ದ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ಮಾಡಿದ್ದಾನೆ.

ಹಲ್ಲೆ ಮಾಡಿದ ವ್ಯಕ್ತಿ ಶಿರವಾಡದ ಸುಭಾಷ್ ಎಂದು ತಿಳಿದು ಬಂದಿದೆ. ಬಸ್ ಚಾಲಕ ಮಹಮ್ಮದ ಎಂಬವರ ತೆಲೆಗೆ ಗಾಯವಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಷರ್ಟ್ ಹಿಡಿದು ಗಲಾಟೆ ಮಾಡಿ ಬೆದರಿಕೆ ಹಾಕಿದ್ದಾನೆ.

ಮೊದಲು ನಿರ್ವಾಹಕನ ಶರ್ಟ್‌ ಕಾಲರ್‌ ಹಿಡಿದು ಎಳೆದಾಡಿದ್ದಾನೆ, ಈ ಘಟನೆ ಚಿತ್ರಿಕರಣ ಮಾಡಿದ ಚಾಲಕನ ಮೊಬೈಲ್ ನೆಲಕ್ಕೆ ಎಸೆದು ಹಾನಿ ಮಾಡಿದ್ದಾನೆ. ಹಾಗೂ ಬಸ್ ಮುಂದೆ ನಿಲ್ಲಿಸಲಾಗಿದ್ದ ಬೈಕ್ ತೆಗೆಯುವಂತೆ ಪ್ರಯಾಣಿಕನೊಬ್ಬ ಹೇಳಿದ್ದಕ್ಕೆ ಪ್ರಯಾಣಿಕನ ಮೇಲೂ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ನಗರದ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement