ಕಾರವಾರ: ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ಅಭಿಮಾನಿ..!

ಕಾರವಾರ: ಅಭಿಮಾನಿಯೊಬ್ಬ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಸೋನಾರವಾಡದ ಅರುಣ ವರ್ಣೇಕರ ಎಂಬವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ತನ್ನ ಎಡಗೈನ ಬೆರಳನ್ನೇ ಕಾಳಿ ಮಾತೆಗೆ ಅರ್ಪಿಸಿದ್ದಾರೆ. ಎಡಗೈ ತೋರು ಬೆರಳು ಕತ್ತರಿಸಿಕೊಂಡಿದ್ದಾರೆ.​ ‘ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದು ಗೋಡೆ ಮೇಲೆ ರಕ್ತದಲ್ಲಿ ರಕ್ತದಲ್ಲಿ ಬರೆದಿದ್ದಾರೆ. ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ ಸಬ್ಸೆ ಮಹಾನ್” ಎಂದು ಗೋಡೆ ಹಾಗೂ ಪೋಸ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಇವರು ಈಗಾಗಲೇ ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ.
ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಈ ಬಾರಿಯೂ ಮೋದಿ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಅರುಣ ಕಾಳಿಗೆ ಅರ್ಪಿಸಿದ್ದಾರೆ.
ಮೋದಿಯವರು ಮೊದಲ ಬಾರಿ ಚುನಾವಣೆಗೆ ನಿಂತಾಗ ಅರುಣ ಅವರು ರಕ್ತದಲ್ಲಿ ಕಾಳಿಗೆ ತಿಲಕ ಇಟ್ಟಿದ್ದರಂತೆ. 2019ರ ಲೋಕಸಭಾ ಚುನಾವಣೆಯಲ್ಲಿ ಕೂಡ ಮೋದಿ ಗೆಲುವಿಗಾಗಿ ಪ್ರಾರ್ಥಿಸಿ ಅವರು ಬೆರಳು ಕತ್ತರಿಸಿಕೊಂಡು ಕಾಳಿ ಮಾತೆಗೆ ರಕ್ತದ ತಿಲಕವಿಟ್ಟಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಕತ್ತಿಯಿಂದ ಬೆರಳು ಕತ್ತರಿಸಿಕೊಂಡಿದ್ದರು. ಬಳಿಕ ಕಾಳಿ ಮಾತೆಗೆ ರಕ್ತದ ತಿಲಕವಿಟ್ಟಿದ್ದರು. ಜತೆಗೆ ಸಾಯಿ ಬಾಬಾ, ಪ್ರಧಾನಿ ಮೋದಿಯ ಫೋಟೊಗೂ ರಕ್ತದ ತಿಲಕವಿಟ್ಟಿದ್ದರು ಎಂದು ವರದಿಯಾಗಿದೆ.
ಮೂಲತಃ ಕಾರವಾರದ ಸೋನಾರವಾಡದವರಾದರೂ ಅನೇಕ ವರ್ಷ ಮುಂಬೈಯಲ್ಲಿ ನೆಲೆಸಿದ್ದ ಇವರು ಮುಂಬೈ ಸಿನೆಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದರು, ಆದರೆ ತಂದೆ-ತಾಯಿಯನ್ನು ನೋಡಿಕೊಳ್ಳುವ ಸಲುವಾಗಿ ಪುನಃ ಕಾರವಾರಕ್ಕೆ ಮರಳಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ , ಭೂ ಕುಸಿತದ ಸಾಧ್ಯತೆ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement