ಬಿಜೆಪಿ ಶಾಸಕ ಯತ್ನಾಳ ವಿರುದ್ಧ ಸಚಿವ ದಿನೇಶ ಗುಂಡೂರಾವ್‌ ಪತ್ನಿ ದೂರು

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ’ ಎಂಬ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಹೇಳಿಕೆ ವಿರುದ್ಧ ಈಗ ಸಚಿವ ದಿನೇಶ ಗುಂಡೂರಾವ್‌ ಅವರ ಪತ್ನಿ ಟಬು ಗುಂಡೂರಾವ್ ದೂರು ದಾಖಲಿಸಿದ್ದಾರೆ. ಯತ್ನಾಳರ ಹೇಳಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಸಂಜಯ ನಗರ ಪೊಲೀಸ್ ಠಾಣೆಗೆ … Continued

ಬಳ್ಳಾರಿ : 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ

ಬಳ್ಳಾರಿ : 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಳ್ಳಾರಿ ಪೊಲೀಸರು ನಡೆಸಿದ ಪ್ರಮುಖ ದಾಳಿಯಲ್ಲಿ 5.60 ಕೋಟಿ ರೂಪಾಯಿ ನಗದು, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಆಭರಣಗಳು ಮತ್ತು 68 ಬೆಳ್ಳಿಯ ತುಂಡುಗಳನ್ನು ಬಳ್ಳಾರಿ ಪಟ್ಟಣದಲ್ಲಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯ (Bellary) ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂಬಳಿ … Continued

ಲೋಕಸಭೆ ಚುನಾವಣೆ : ‘ಪೂರ್ವ, ದಕ್ಷಿಣದಲ್ಲಿ ಬಿಜೆಪಿಗೆ ಲಾಭ, ಅದು 300 ಸೀಟು ಗೆಲ್ಲಬಹುದು; ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಭವಿಷ್ಯ

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ ಸ್ಥಾನಗಳು ಮತ್ತು ಮತಗಳ ಹಂಚಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತದೆ ಮತ್ತು ಅದು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಆಂಧ್ರಪ್ರದೇಶದಲ್ಲಿ … Continued

ಏಪ್ರಿಲ್‌ 14 ರಂದು ರಾಜ್ಯದಲ್ಲಿ ಮೋದಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಏಪ್ರಿಲ್ 14ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮೋದಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ದೇವನಹಳ್ಳಿ ಬಳಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹೆಬ್ಬಾಳ ಮತ್ತು ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.

ಬೆಂಗಳೂರು ಐಐಎಸ್‌ಸಿ ಹಳೆಯ ವಿದ್ಯಾರ್ಥಿ ವಿಪ್ರೋ ಕಂಪನಿಗೆ ನೂತನ ಸಿಇಒ

ಬೆಂಗಳೂರು : ವಿಪ್ರೋ ಕಂಪನಿಗೆ ನೂತನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ಶ್ರೀನಿವಾಸ ಪಲ್ಲಿಯಾ ಅವರನ್ನು ನೇಮಕ ಮಾಡಲಾಗಿದೆ. ಥಿಯೆರಿ ಡೆಲಾಪೋರ್ಟೆ ಅವರು ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಶ್ರೀನಿವಾಸ ಪಲ್ಲಿಯಾ ಅವರು ಎಂಡಿ ಮತ್ತು ಸಿಇಒ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬೆಂಗಳೂರು ಮೂಲದ ಐಟಿ ದೈತ್ಯ ಹೇಳಿಕೆಯಲ್ಲಿ ತಿಳಿಸಿದ್ದು, ತಕ್ಷಣವೇ ಜಾರಿಗೆ ಬರಲಿದೆ. … Continued

ಕೇರಳದ ವಿದ್ಯಾರ್ಥಿ ಶವವಾಗಿ ಪತ್ತೆಯಾಗುವ ಮುನ್ನ ಹಿರಿಯ ವಿದ್ಯಾರ್ಥಿಗಳು, ಸಹಪಾಠಿಗಳಿಂದ ನಿರಂತರ 29 ಗಂಟೆಗಳ ಕಾಲ ಚಿತ್ರಹಿಂಸೆ : ವರದಿ

ಮಾಧ್ಯಮ ವರದಿಯ ಪ್ರಕಾರ ಫೆಬ್ರವರಿ 18 ರಂದು ಕೇರಳದ ವಯನಾಡ್ ಜಿಲ್ಲೆಯ ಕಾಲೇಜು ಹಾಸ್ಟೆಲ್‌ನ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ 20 ವರ್ಷದ ಪಶುವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥನ್ ಜೆ.ಎಸ್. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳಿಂದ ಸುಮಾರು 29 ಗಂಟೆಗಳ ಕಾಲ “ನಿರಂತರವಾಗಿ” ಹಲ್ಲೆ ಚಿತ್ರಹಿಂಸೆಗೆ ಒಳಗಾಗಿದ್ದರು. ಶುಕ್ರವಾರ ಸಂಜೆ ಕೇರಳದ … Continued

ಚಿತ್ರದುರ್ಗ : ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸಾವು, ಹಲವರಿಗೆ ಗಾಯ

ಚಿತ್ರದುರ್ಗ : ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಅಪಘಾತವು ಮುಂಜಾನೆ 5 ಗಂಟೆ ಸುಮಾರಿಗೆ … Continued

ಪೈಶಾಚಿಕ ಕೃತ್ಯ…: ಪತ್ನಿ ಹತ್ಯೆ ಮಾಡಿ 224 ತುಂಡುಗಳಾಗಿ ಕತ್ತರಿಸಿ ಒಂದು ವಾರ ಅಡುಗೆ ಮನೆಯಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿ…!

ಬೆಚ್ಚಿಬೀಳಿಸಿದ ಭೀಕರ ಹತ್ಯೆಯೊಂದರಲ್ಲಿ, 28 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಚಾಕುವಿನಿಂದ ಇರಿದು ಕೊಂದು, ಆಕೆಯ ದೇಹವನ್ನು 200 ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಒಂದು ವಾರದವರೆಗೆ ತನ್ನ ಅಡುಗೆಮನೆಯಲ್ಲಿ ಬಚ್ಚಿಟ್ಟಿದ್ದ ಘಟನೆ ಬ್ರಿಟನ್ನಿನಲ್ಲಿ ನಡೆದಿದೆ. ನಂತರ ಆತ ತನ್ನ ಸ್ನೇಹಿತನ ಸಹಾಯದಿಂದ ಪತ್ನಿಯ ದೇಹದ ತುಂಡುಗಳನ್ನು ನದಿಗೆ ಎಸೆದಿದ್ದಾನೆ. ನಿಕೋಲಸ್ ಮೆಟ್ಸನ್(28) ಎಂಬ ವ್ಯಕ್ತಿ … Continued

ಅಲೆಕ್ಸಾ ಬೊಗಳು…: ಮಂಗಗಳ ದಾಳಿಯಿಂದ ಪುಟ್ಟ ಮಗುವನ್ನು ರಕ್ಷಿಸಿದ ಬಾಲಕಿಗೆ ಉದ್ಯೋಗದ ಆಫರ್‌ ನೀಡಿದ ಉದ್ಯಮಿ ಆನಂದ ಮಹೀಂದ್ರಾ…!

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರಾದ ಆನಂದ ಮಹೀಂದ್ರಾ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಸೃಜನಾತ್ಮಕ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಗಮನ ಸೆಳೆಯುತ್ತಾರೆ. ಅಂತರ್ಜಾಲದಲ್ಲಿನ ಅವರ ಅನೇಕ ಪೋಸ್ಟ್‌ಗಳು ಪ್ರಾಥಮಿಕವಾಗಿ ಉತ್ತಮ ಮಾನವ ಪ್ರಯತ್ನಗಳ ಮೇಲೆ ಕೇಂದ್ರೀಕರಿಸುತ್ತವೆ. ಈಗ, ಕೈಗಾರಿಕೋದ್ಯಮಿ ತನ್ನ ಇತ್ತೀಚಿನ X (ಹಿಂದೆ ಟ್ವಿಟರ್) ಮೂಲಕ, ಅಮೆಜಾನ್‌ನ ವರ್ಚುವಲ್ ವಾಯ್ಸ್ ಅಸಿಸ್ಟೆಂಟ್ ಸಾಧನ ʼಅಲೆಕ್ಸಾʼ ಬಳಸಿಕೊಂಡು … Continued

ಅತಿಹೆಚ್ಚು ಆದಾಯ ಪಡೆದ ಮುಜರಾಯಿ ದೇವಾಲಯಗಳ ಪಟ್ಟಿ ಬಿಡುಗಡೆ ; ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 1ನೇ ಸ್ಥಾನ : ರಾಜ್ಯದ 8 ಶ್ರೀಮಂತ ದೇವಾಲಯಗಳು..

ಬೆಂಗಳೂರು : 2023-24ರಲ್ಲಿ ಅತಿಹೆಚ್ಚು ಆದಾಯ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆ ಆಯುಕ್ತರು ಬಿಡುಗಡೆಗೊಳಿಸಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2023-24ನೇ ಆರ್ಥಿಕ ವರ್ಷದಲ್ಲಿ ₹146.01 ಕೋಟಿ ಆದಾಯ ಗಳಿಸಿದೆ ಎಂದು ಮುಜರಾಯಿ ಆಯುಕ್ತರು ತಿಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಸತತ 13ನೇ ವರ್ಷ ಆದಾಯದಲ್ಲಿ … Continued