ಬಿಜೆಪಿ ಶಾಸಕ ಯತ್ನಾಳ ವಿರುದ್ಧ ಸಚಿವ ದಿನೇಶ ಗುಂಡೂರಾವ್‌ ಪತ್ನಿ ದೂರು

ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ’ ಎಂಬ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಹೇಳಿಕೆ ವಿರುದ್ಧ ಈಗ ಸಚಿವ ದಿನೇಶ ಗುಂಡೂರಾವ್‌ ಅವರ ಪತ್ನಿ ಟಬು ಗುಂಡೂರಾವ್ ದೂರು ದಾಖಲಿಸಿದ್ದಾರೆ.
ಯತ್ನಾಳರ ಹೇಳಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯತ್ನಾಳ ಹೇಳಿಕೆಯಿಂದ ನನ್ನ ಮನಸ್ಸಿಗೆ ನೋವಾಗಿದ್ದು, ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಟಬು ರಾವ್‌ ಅವರು, ಶಾಸಕ ಯತ್ನಾಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ. ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ಕೀಳುಮಟ್ಟದ, ಅವಹೇಳನಕಾರಿ ಮತ್ತು ಮಾನಹಾನಿಕರವಾಗಿದೆ. ನಾನು ಮುಸಲ್ಮಾನನಾಗಿ ಜನಿಸಿರಬಹುದು, ಆದರೆ ನನ್ನ ಭಾರತೀಯತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಹೇಳಿದ್ದಾರೆ.

ಏ.6 ರಂದು ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತ ವಿಚಾರಣೆ ನಡೆಸಿದ್ದ ಎನ್​ಐಎ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾನಾಡುವಾಗ ದಿನೇಶ್ ಗುಂಡೂರಾವ್ ಮಾಡಿದ ಟ್ವೀಟ್‌ಗೆ ಪ್ರತಿಕ್ರಿಯಿಸಿವಾಗ ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ, ದೇಶ ವಿರೋಧಿ ಹೇಳಿಕೆ ನೀಡುವುದು ಅವರಿಗೆ ಚಟವಾಗಿದೆ ಎಂದು ಹೇಳಿದ್ದರು. ಯತ್ನಾಳ ಹೇಳಿಕೆ ವಿರುದ್ಧ ಈ ಮೊದಲು ಕಾಂಗ್ರೆಸ್ ಕಾರ್ಯಕರ್ತರು ಶೇಷಾದ್ರಿಪುರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಈಗ ಮತ್ತೊಂದು ದೂರು ದಾಖಲಾದಂತಾಗಿದೆ.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement