ಖಾನಾಪುರ: ಕಾಡುಕೋಣ ತಿವಿದು ವೃದ್ದೆ ಸಾವು

ಬೆಳಗಾವಿ : ಕಾಡುಕೋಣ ತಿವಿದು ವೃದ್ದೆ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ಹೊರವಲಯದ ಬಳಿ ಈ ದುರ್ಘಟನೆ ನಡೆದಿದ್ದು, ಕಾಡುಕೋಣದ ದಾಳಿಯಿಂದ ಸರಸ್ವತಿ ಅರ್ಜುನ ಗಾವಡೆ (80) ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಅವರು ಮನೆಯಿಂದ ತಮ್ಮ ಹೊಲದ ಗೋಡಂಬಿ ಬೀಜಗಳನ್ನು ಕೀಳಲು ಹೋದಾಗ ಕಾಡುಕೋಣ … Continued

ಬೆಂಗಳೂರು : ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಇದ್ದ ವಾಹನ ಏರಿ ಹಾರ ಹಾಕಿದ ವ್ಯಕ್ತಿ…!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಭೈರಸಂದ್ರದಲ್ಲಿ ಸೌಮ್ಯ ರೆಡ್ಡಿ ಅವರ ಪರ ಪ್ರಚಾರ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಪ್ರಚಾರದ ವೇಳೆ ಗನ್ ಇಟ್ಟುಕೊಂಡು ಬಂದು ಕ್ಯಾಂಟರ್ ಏರಿದ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಪಕ್ಷದ ಬ್ಯಾನರ್‌ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರ….!

ಭೋಪಾಲ್ : ಮಧ್ಯಪ್ರದೇಶದ ಮಂಡಲಾ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಅವರ ಚುನಾವಣಾ ಪ್ರಚಾರದ ವೇಳೆ ಕಟ್ಟಿದ್ದ ಕಾಂಗ್ರೆಸ್‌ ಪಕ್ಷದ ಬ್ಯಾನರ್‌ನಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗ್ಗನ್‌ ಸಿಂಗ್‌ ಕುಲಸ್ತೆ ಅವರ ಫೋಟೊ ರಾರಾಜಿಸಿದೆ. ಇದು ಕಾಂಗ್ರೆಸ್‌ ನಾಯಕರ ಮುಜುಗರಕ್ಕೆ ಕಾರಣವಾಗಿದೆ. ಈ ಘಟನೆ ಬಗ್ಗೆ ಕಾಂಗ್ರೆಸ್‌ ಅದನ್ನು ‘ಮಾನವ ದೋಷ’ ಎಂದು … Continued

‘ಚುನಾವಣೆಗೆ ಮುನ್ನ ಎಷ್ಟು ಮಂದಿ ಜೈಲು ಪಾಲಾಗಬೇಕು…?’: ಸುಪ್ರೀಂ ಕೋರ್ಟ್ ಪ್ರಶ್ನೆ, ಯೂ ಟ್ಯೂಬರ್‌ ಗೆ ರಿಲೀಫ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಗ್ಗೆ 2021ರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ … Continued

ರಾಜಕೀಯ ಪ್ರವೇಶಿಸುವ ವದಂತಿ : ನಟ ಸಂಜಯ ದತ್ತ ಹೇಳಿದ್ದೇನು..?

ಮುಂಬೈ : ಬಾಲಿವುಡ್ ನಟ ಸಂಜಯ ದತ್ತ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 2024 ರಲ್ಲಿ ಹರಿಯಾಣದಿಂದ ಸ್ಪರ್ಧಿಸಬಹುದು ಎಂಬ ವದಂತಿಗಳ ಬಗ್ಗೆ ನಟ ಸಂಜಯ ದತ್ತ ಪ್ರತಿಕ್ರಿಯಿಸಿದ್ದಾರೆ. ಅಂತಹ ಎಲ್ಲಾ ವದಂತಿಗಳನ್ನು ತಳ್ಳಿಹಾಕಿರುವ ಅವರು ಈ ಬಗ್ಗೆ ತನ್ನ X (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಪೋಸ್ಟ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸಂಜಯ ದತ್ತ ಅವರು ತಮ್ಮ … Continued

ಯೋಗೀಶ ಗೌಡ ಕೊಲೆ ಪ್ರಕರಣ: ವಿಚಾರಣೆ ರದ್ದತಿ ಕೋರಿದ್ದ ಶಾಸಕ ವಿನಯ ಕುಲಕರ್ಣಿ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಮಾರ್ಚ್‌ … Continued

ಬರ ಪರಿಹಾರಕ್ಕೆ ಕರ್ನಾಟಕದ ಅರ್ಜಿ : ಕೇಂದ್ರ-ರಾಜ್ಯಗಳ ನಡುವೆ ವ್ಯಾಜ್ಯ ಬೇಡ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರ ಆಕ್ಷೇಪಿಸಿರುವ ಅರ್ಜಿಯ ವಿಚಾರಣೆಯ ವೇಳೆ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ವ್ಯಾಜ್ಯ ಬೇಡ ಎಂದು ಸೋಮವಾರ ಕಿವಿಮಾತು ಹೇಳಿದ್ದು, ಕರ್ನಾಟಕದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಕರ್ನಾಟಕದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು … Continued

ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಸವಾರ ಸಾವು

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಇಂದು, ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಮೃತನನ್ನು ಪ್ರಕಾಶ (35) ಎಂದು ಗುರುತಿಸಲಾಗಿದೆ. ನಿಂತಿದ್ದ ಕಾರಿನ ಡೋರ್ ಒಪನ್ ಮಾಡುತ್ತಿದ್ದಾಗ ಬೈಕ್ … Continued

ಲೋಕಸಭೆ ಚುನಾವಣೆ: ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ದಿಂಗಾಲೇಶ್ವರ ಸ್ವಾಮೀಜಿ ಘೋಷಣೆ

ಬೆಂಗಳೂರು : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಧಾರವಾಡದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜಕೀಯ ರಂಗವನ್ನು ಪ್ರವೇಶಿಸುತ್ತೇಣೆ ಎಂದು ಹೇಳಿದರು. ಅಧಿಕಾರದ ಮತ್ತು ಸಂಪತ್ತಿನ ಮದದಲ್ಲಿ ಪ್ರಹ್ಲಾದ ಜೋಶಿ ಮೆರೆಯುತ್ತಿದ್ದಾರೆ. ಅವರ ಚೇಲಾಗಳು … Continued

5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ : ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ; ಫಲಿತಾಂಶ ಪ್ರಕಟಿಸಿದಂತೆ ಆದೇಶ

ನವದೆಹಲಿ: 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ಕುರಿತು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಈ ತರಗತಿಗಳ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಪೀಠ ಆದೇಶಿಸಿದೆ. ಈ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ರಾಜ್ಯ … Continued