‘ಚುನಾವಣೆಗೆ ಮುನ್ನ ಎಷ್ಟು ಮಂದಿ ಜೈಲು ಪಾಲಾಗಬೇಕು…?’: ಸುಪ್ರೀಂ ಕೋರ್ಟ್ ಪ್ರಶ್ನೆ, ಯೂ ಟ್ಯೂಬರ್‌ ಗೆ ರಿಲೀಫ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಗ್ಗೆ 2021ರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿದ್ದಾರೆ.
ನ್ಯಾಯಮೂರ್ತಿಗಳಾದ ಅಭಯ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು ಎ ದುರೈಮುರುಗನ್ ಸಟ್ಟೈ ತಮಗೆ ನೀಡಲಾದ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ವಿಚಾರಣೆಯ ವೇಳೆ ನ್ಯಾಯಮೂರ್ತಿ ಓಕಾ ಅವರು ತಮಿಳುನಾಡು ರಾಜ್ಯವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಉದ್ದೇಶಿಸಿ, “ಚುನಾವಣೆಗೂ ಮುನ್ನ ನಾವು ಯೂಟ್ಯೂಬ್‌ನಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನು ಕಂಬಿ ಹಿಂದೆ ಹಾಕಲು ಪ್ರಾರಂಭಿಸಿದರೆ, ಎಷ್ಟು ಮಂದಿಯನ್ನು ಜೈಲಿಗೆ ಹಾಕಬೇಕಾಗುತ್ತದೆ ಎಂದು ಊಹಿಸಿ?”ಎಂದು ಹೇಳಿತು.

ಜಾಮೀನಿನಲ್ಲಿರುವಾಗ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಎ ದುರೈಮುರುಗನ್  ಅವರಿಗೆ ಷರತ್ತು ವಿಧಿಸುವ ಮನವಿಯನ್ನು ನ್ಯಾಯಾಲಯವು ಪರಿಗಣಿಸಲಿಲ್ಲ.
ಯೂಟ್ಯೂಬರ್ ದೊರೈಮುರುಗನ್ ಸಟ್ಟೈ ಅವರ ಜಾಮೀನು ರದ್ದುಮಾಡಿದ್ದ ಆದೇಶವನ್ನು ಪೀಠವು ಅಸಿಂಧುಗೊಳಿಸಿದೆ. ತಮ್ಮ ಅನಿಸಿಕೆಗಳನ್ನು ಹೇಳಿಕೊಂಡ ದೊರೈಮುರುಗನ್ ಅವರು ತಮ್ಮ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಂಡಿಲ್ಲ ಎಂದು ಪೀಠ ಹೇಳಿದೆ. ಜಾಮೀನಿನ ಮೇಲೆ ಹೊರಗಿದ್ದ ಸಂದರ್ಭದಲ್ಲಿ ಅವಹೇಳನಕಾರಿಯಾಗಿ ಮಾತನಾಡಬಾರದು ಎಂದು ದೊರೈಮುರುಗನ್ ಅವರಿಗೆ ಷರತ್ತು ವಿಧಿಸಬೇಕು ಎಂದು ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪೀಠವು ತಿರಸ್ಕರಿಸಿದೆ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ನ್ಯಾಯ ಕೋರಿ, ಸಟ್ಟೈ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಉನ್ನತ ನ್ಯಾಯಾಲಯವು ಆಗಸ್ಟ್ 2021 ರಲ್ಲಿ ಅವರಿಗೆ ನೀಡಲಾದ ಜಾಮೀನನ್ನು ಮುಂದುವರೆಸಿತು.
ನ್ಯಾಯಾಲಯಕ್ಕೆ ನೀಡಿದ್ದ ಮಾತನ್ನು ಉಲ್ಲಂಘಿಸಿ ದೊರೈಮುರುಗನ್ ಅವರು ಸ್ಟಾಲಿನ್ ಅವರನ್ನು ಉದ್ದೇಶಿಸಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಅವರಿಗೆ ನೀಡಿದ್ದ ಜಾಮೀನನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ದೊರೈಮುರುಗನ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳ ಮುಂಚೆ ಈ ತೀರ್ಪು ಬಂದಿದ್ದು, ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement