ನಾಳೆ (ಏಪ್ರಿಲ್‌ 10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶ ನೋಡುವುದು ಹೇಗೆ…?

ಬೆಂಗಳೂರು : ಮಾರ್ಚ್‌ 1ರಿಂದ ಮಾರ್ಚ್ 22ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು (Second PU Result) ನಾಳೆ, ಬುಧವಾರ (ಏಪ್ರಿಲ್‌ 10) ಪ್ರಕಟಿಸಲಾಗುತ್ತದೆ.
ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಬುಧವಾರ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ವೆಬ್​​ಸೈಟ್​ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಫಲಿತಾಂಶ ಪರಿಶೀಲಿಸುವುದು ಹೇಗೆ ಮತ್ತ ಎಲ್ಲಿ?
karresults.nic.in ಅಥವಾ pue.kar.nic ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದಾಗಿದೆ.
ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
ಲಾಗಿನ್ ಪುಟದಲ್ಲಿ ಅಭ್ಯರ್ಥಿಯು ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಬೇಕು.
ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.
ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು

ಪ್ರಮುಖ ಸುದ್ದಿ :-   ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರು ಮತ್ತೆ ಪೊಲೀಸ್‌ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು 1 ಅನ್ನು ಮಾರ್ಚ್ 01 ರಿಂದ 22ರ ವರೆಗೆ ನಡೆದಿತ್ತು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ ಮಾರ್ಚ್‌ 25ರಿಂದ ಮೌಲ್ಯಮಾಪನ ಆರಂಭಿಸಲಾಗಿತ್ತು. ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು. ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮೊದಲೇ ಮೂರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಬೇಕಿದೆ. ಹೀಗಾಗಿ ಬೇಗನೆ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತಿದೆ.

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement