ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರಗೆ Z-ಕೆಟಗರಿ ವಿಐಪಿ ಭದ್ರತೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರಿಗೆ Z- ಕೆಟಗರಿ ಸಶಸ್ತ್ರ ಕಮಾಂಡೋಗಳ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.
ಕೇಂದ್ರ ಗೃಹ ಸಚಿವಾಲಯವು ಈ ಕಾರ್ಯಕ್ಕಾಗಿ ಸುಮಾರು 40-45 ಭದ್ರತಾ ಸಿಬ್ಬಂದಿಗಳುಳ್ಳ ತುಕಡಿಯನ್ನು ಒದಗಿಸುವ ಮೂಲಕ ಹೊಣೆಗಾರಿಕೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ ವಹಿಸಿಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಭದ್ರತಾ ಏಜೆನ್ಸಿಗಳು ನೀಡಿದ ಬೆದರಿಕೆ ವರದಿ ನಂತರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವಕುಮಾರ ಅವರಿಗೆ ಬಲವಾದ ರಕ್ಷಣೆ ನೀಡಬೇಕು ಎಂದು ಶಿಫಾರಸು ಮಾಡಿದ್ದವು.

ಏಪ್ರಿಲ್ 19 ರಂದು ಪ್ರಾರಂಭವಾಗುವ ಏಳು ಹಂತದ ಸಾರ್ವತ್ರಿಕ ಚುನಾವಣೆಯ ಸಿದ್ಧತೆಗಳ ಮಧ್ಯೆ ಈ ಕ್ರಮವು ಬಂದಿದೆ. ಭಾರತದ ಮುಖ್ಯ ಚುನಾವಣಾ ಆಯುಕ್ತರು ದೇಶಾದ್ಯಂತ ಪ್ರಯಾಣ ಮಾಡುವ ಸಮಯದಲ್ಲಿ ಸಶಸ್ತ್ರ ಕಮಾಂಡೋಗಳು ಅವರೊಂದಿಗೆ ಹೋಗುತ್ತಾರೆ ಎಂದು ಮೂಲಗಳು ತಿಳಿಸಿವೆ.
1984ರ ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ರಾಜೀವಕುಮಾರ ಅವರು, ಅವರು ಮೇ 15, 2022 ರಂದು 25 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಅವರನ್ನು ಸೆಪ್ಟೆಂಬರ್ 1, 2020 ರಂದು ಚುನಾವಣಾ ಆಯೋಗಕ್ಕೆ ಚುನಾವಣಾ ಆಯುಕ್ತರಾಗಿ ನೇಮಿಸಲಾಯಿತು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಎಫ್ ಐ ಆರ್ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement