ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಯುಗಾದಿ ಹಬ್ಬದ ದಿನದಂದು ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ತೀವ್ರ ಉಷ್ಣಾಂಶ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಟಾಂಶ ಗರಿಷ್ಠ ಮಟ್ಟ ತಲುಪಿದೆ. ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮುಂತಾದ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದ್ದು, ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಇಂದು, ಮಂಗಳವಾರ ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 13ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ವಿಜಯನಗರದಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸದ್ಯದ ವಾತಾವರಣದ ಪ್ರಕಾರ ಏಪ್ರಿಲ್‌ 13 ರಿಂದ ಏಪ್ರಿಲ್‌ 15 ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement