ವಾಕ್‌-ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ವಾದ ಆಲಿಸಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ವಾಕ್‌ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರ ವಾದವನ್ನು ಪ್ರಮಾಣೀಕೃತ ದುಭಾಷಿಯ ನೆರವಿನಿಂದ ಆಲಿಸುವ ಮೂಲಕ ಕರ್ನಾಟಕ ಹೈಕೋರ್ಟ್‌ ಸೋಮವಾರ ಇತಿಹಾಸ ಸೃಷ್ಟಿಸಿದೆ.
ಕೌಟುಂಬಿಕ ವ್ಯಾಜ್ಯ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಪ್ರತಿವಾದಿ ಪತ್ನಿ ಪರವಾಗಿ ಸಾರಾ ಸನ್ನಿ ವಾದಿಸಿದರು.
ಸ್ಕಾಟ್ಲೆಂಡ್‌ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ ಪತ್ನಿಯ ನಡುವಿನ ಕೌಟುಂಬಿಕ ವ್ಯಾಜ್ಯದ ಭಾಗವಾಗಿ ಪತಿಗೆ ಲುಕ್‌ ಔಟ್‌ (ಎಲ್‌ಒಸಿ) ನೋಟಿಸ್ ಜಾರಿಗೊಳಿಸಲಾಗಿತ್ತು. ಇದರ ರದ್ದತಿ ಕೋರಿ ಪತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ನ್ಯಾಯಾಲಯದಲ್ಲಿ ನಡೆಯಿತು. ಈ ಪ್ರಕರಣದಲ್ಲಿ ಸಾರಾ ಸನ್ನಿ ಪ್ರತಿವಾದಿಯಾಗಿರುವ ಪತ್ನಿಯ ಪರವಾಗಿ ವಾದಿಸಿದ್ದಾರೆ.

ಕೆಲ ಕಾಲ ಸಂಜ್ಞೆಗಳ ಮೂಲಕ ವಿಷಯ ಮಂಡಿಸಿದ ಸಾರಾ ವಾದಿಸಿದರು. ನಂತರ ದುಭಾಷಿಯ ನೆರವಿನಿಂದ ಸಾರಾ ಸನ್ನಿ ವಿಸ್ತೃತವಾಗಿ ವಾದ ಮಂಡಿಸಿದರು. ಇದಕ್ಕೆ ಮೆಚ್ಚುಗೆ ಸೂಚಿಸಬೇಕಿದೆ. ದುಭಾಷಿಯ ನೆರವನಿಂದ ಸಾರಾ ಮಂಡಿಸಿದ ವಾದಕ್ಕೆ ಅಧಿಕೃತವಾಗಿ ಮೆಚ್ಚುಗೆ ಸೂಚಿಸಲಾಗಿದೆ ಎಂದು ಪೀಠವು ಹೇಳಿತು.
ವಿಚಾರಣೆಯ ಕೊನೆಯ ಹಂತದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್‌ ಜರನಲ್‌ ಅರವಿಂದ ಕಾಮತ್‌ ಅವರು “ವಾಕ್‌ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ವಾದ ಆಲಿಸುವ ಮೂಲಕ ಕರ್ನಾಟಕ ಹೈಕೋರ್ಟ್‌ ಇತಿಹಾಸ ಸೃಷ್ಟಿಸಿದ್ದು, ಇಂಥ ವಕೀಲೆಯ ವಾದ ಆಲಿಸಿದ ದೇಶದ ಮೊದಲ ಹೈಕೋರ್ಟ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಾರಾ ಅವರು ಸಿಜೆಐ ಮುಂದೆ ವಾದಿಸಿದ್ದರು. ಆದರೆ, ಹೈಕೋರ್ಟ್‌ವೊಂದರಲ್ಲಿ ಇದೇ ಮೊದಲ ಬಾರಿಗೆ ವಾದಿಸಿದ್ದಾರೆ ಎಂದು ತಿಳಿಸಿದರು.
ಏಪ್ರಿಲ್‌ 4ರಂದು ಪೀಠವು ಸಾರಾಗೆ ನೆರವಾಗಲು ಮಾಹಿತಿ ಮತ್ತು ತಂತ್ರಜ್ಞಾನದ ಸಚಿವಾಲಯದ ನೆರವಿನಿಂದ ದುಭಾಷಿ ಸಹಾಯ ಪಡೆಯುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿತ್ತು.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement