ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್‌ ಕಣ್ಣಿಗೆ ಗಾಯ

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರದ ಮಾಜಿ ಸಚಿವೆ ಬಾನ್ಸುರಿ ಸ್ವರಾಜ್‌ ಅವರ ಕಣ್ಣಿಗೆ ಗಾಯವಾಗಿದೆ.
ಪ್ರಚಾರದ ವೇಳೆ ಎಡಗಣ್ಣಿಗೆ ಗಾಯವಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ವೈದ್ಯರ ಬಳಿ ತೆರಳಿ ಒಂದು ಕಣ್ಣಿಗೆ ಬ್ಯಾಂಡೇಜ್‌ ಹಾಕಿಕೊಂಡಿರುವ ಪೋಟೊ ಶೇರ್‌ ಮಾಡಿಕೊಂಡಿರುವ ಬಾನ್ಸುರಿ ಸ್ವರಾಜ್‌, ‘ಪ್ರಚಾರದ ವೇಳೆ ಕಣ್ಣಿಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದೆ, ತಕ್ಷಣ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮಂಗಳವಾರ ಈ ಘಟನೆ ನಡೆದಿದ್ದು, ಇಂದು (ಬುಧವಾರ) ಕಣ್ಣಿಗೆ ಬ್ಯಾಂಡೇಜ್‌ ಹಾಕಿಕೊಂಡೇ ಅವರು ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಕಣ್ಣಿಗೆ ಹೇಗೆ ಗಾಯವಾಯಿತು ಎನ್ನುವ ಬಗ್ಗೆ ಮಾಹಿತಿ ಹಂಚಿಕೊಂಡಿಲ್ಲ.
ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌ ಅವರು ಇದೇ ಮೊದಲ ಬಾರಿಗೆ ನವದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಅವರು 1982 ರಲ್ಲಿ ದೆಹಲಿಯಲ್ಲಿ ಜನಿಸಿದರು. ವಕೀಲ ವೃತ್ತಿಯಲ್ಲಿ ಸುಮಾರು ಒಂದೂವರೆ ದಶಕದ ಅನುಭವ ಹೊಂದಿರುವ ಅವರು 2007 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ಸೇರಿದ್ದರು,

ಅವರು ವಾರ್ವಿಕ್ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಬಿಎ (ಆನರ್ಸ್) ಪದವಿ ಪಡೆದರು. ಇದಾದ ನಂತರ, ಲಂಡನ್‌ನ ಪ್ರತಿಷ್ಠಿತ ಬಿಪಿಪಿ ಕಾನೂನು ಶಾಲೆಯಲ್ಲಿ ಕಾನೂನು ಅಧ್ಯಯನ ಮಾಡಿದರು. ಅವರು ಬ್ಯಾರಿಸ್ಟರ್ ಎಟ್ ಲಾ ಆಗಿ ಅರ್ಹತೆ ಪಡೆದರು. ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಸೇಂಟ್ ಕ್ಯಾಥರೀನ್ ಕಾಲೇಜಿನಲ್ಲಿ ತಮ್ಮ ಮಾಸ್ಟರ್ ಆಫ್ ಸ್ಟಡೀಸ್ ಅನ್ನು ಪೂರ್ಣಗೊಳಿಸಿದರು.
ಕಳೆದ ವರ್ಷ ಬಿಜೆಪಿಯು ಬಾನ್ಸುರಿ ಸ್ವರಾಜ್ ಅವರನ್ನು ದೆಹಲಿ ರಾಜ್ಯದ ಕಾನೂನು ಘಟಕದ ರಾಜ್ಯ ಸಹ ಸಂಚಾಲಕರನ್ನಾಗಿ ಮಾಡಿತ್ತು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ನವದೆಹಲಿ ಕ್ಷೇತ್ರದಿಂದ ಮೀನಾಕ್ಷಿ ಲೇಖಿ ಬದಲಿಗೆ ಬಾನ್ಸುರಿ ಸ್ವರಾಜ್ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ ಅವರನ್ನು ಕಣಕ್ಕಿಳಿಸಿದೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement