ದ್ವಿತೀಯ ಪಿಯು : ಕುಮಟಾ ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ಫಲಿತಾಂಶ ಶೇ.92, ಅನನ್ಯ ಕಾಮತ್‌ (ಶೇ.98) ಪ್ರಥಮ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶ ಶೇ.92 ಆಗಿದ್ದು ಪರೀಕ್ಷೆಗೆ ಕುಳಿತವರಲ್ಲಿ 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಾಲೇಜು ವಿದ್ಯಾರ್ಥಿನಿ ಅನನ್ಯ ಕಾಮತ್ ಶೇ.98 (588)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಸಂಖ್ಯಾ ಶಾಸ್ತ್ರ, ಲೆಕ್ಕ ಶಾಸ್ತ್ರ ಮತ್ತು ಸಂಸ್ಕೃತದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾರೆ. ದ್ವಿತೀಯ ಸ್ಥಾನ ಪಡೆದ ವಿಗ್ನೇಶ ನಾಯ್ಕ ಶೇ.96.7 (577) ಅಂಕ ಪಡೆದಿದ್ದು ಕಂಪ್ಯೂಟರ್ ವಿಜ್ಞಾನದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ್ದಾರೆ. ಚಾಂದನಿ ಕುಮಟಾ ಶೇ.96 (576) ಅಂಕ ಗಳಿಸಿ ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಎನ್.ಜಿ. ಹೆಗಡೆ, ಕೆನರಾ ಕಾಲೇಜು ಸೊಸೈಟಿಯ ಉಪಾಧ್ಯಕ್ಷರಾದ ಡಿ. ಎಂ. ಕಾಮತ್, ಕಾರ್ಯಾಧ್ಯಕ್ಷ ಹನುಮಂತ ಶಾನಭಾಗ, ಕಾರ್ಯದರ್ಶಿ ವೈ. ವಿ. ಶಾನಭಾಗ ಹಾಗೂ ಆಡಳಿತ ಮಂಡಳಿಯ ಸದಸ್ಯರುಗಳು ಕಾಲೇಜಿನ ಉಪನ್ಯಾಸಕರು ಅಭಿನಂದಿಸಿದ್ದಾರೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement