ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ ; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು (2nd PUC Result) ಬುಧವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಒಟ್ಟಾರೆ 81.15ರಷ್ಟು %ಮಂದಿ ಉತ್ತೀರ್ಣರಾಗಿದ್ದಾರೆ. ಹೊಸದಾಗಿ ಪರೀಕ್ಷೆ ಬರೆದವರು ಶೇ.84.59 ಫಲಿತಾಂಶ ದಾಖಲಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು, ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
97.37% ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ. 96.80% ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನ, 94.89% ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ ಮೂರನೇ ಸ್ಥಾನ ಹಾಗೂ ಶೇ.92.51 ಫಲಿತಾಂಶದೊಂದಿಗೆ ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ಗದಗ ಜಿಲ್ಲೆ ಶೇ.72.86 ಫಲಿತಾಂಶದೊಂದಿಗೆ ಕೊನೆ ಸ್ಥಾನ ಪಡೆದಿದೆ. ಬೆಂಗಳೂರು ಉತ್ತರ ಶೇ.88.67 ಹಾಗೂ ಬೆಂಗಳೂರು ದಕ್ಷಿಣ ಶೇ.89.57 ಫಲಿತಾಂಶ ದಾಖಲಿಸಿವೆ.

ಗಣಿತದಲ್ಲಿ 6960 ಮಂದಿ, ಜೀವಶಾಸ್ತ್ರದಲ್ಲಿ 5925 ಮಂದಿ, 2570 ಮಂದಿ ಕನ್ನಡದಲ್ಲಿ , 1499 ಮಂದಿ ಸಂಸ್ಕೃತದಲ್ಲಿ , ಅರ್ಥಶಾಸ್ತ್ರದಲ್ಲಿ 1403 ಮಂದಿ, ಗಣಕ ವಿಜ್ಞಾನದಲ್ಲಿ 2661 ಮಂದಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.
ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿ ಗಳು – 6,98,378
ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳು- 5,52690
ಶೇಕಾಡ 85% ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು – 1,53,370
ಶೇಕಡಾ 60% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು– 2,89,733
ದ್ವಿತೀಯ ದರ್ಜೆ- 72,098
ತೃತೀಯ ದರ್ಜೆಯಲ್ಲಿ ಉತ್ತೀರ್ಣರಾದವರು – 37,489

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಪಿಯುಸಿ ಪರೀಕ್ಷೆ 1 ಫಲಿತಾಂಶ ಚೆಕ್‌ ಮಾಡುವುದು ಹೇಗೆ?
ವಿದ್ಯಾರ್ಥಿಗಳು ವೆಬ್‌ಸೈಟ್‌ ಲಿಂಕ್ http://www.karresults.nic.in/# ಗೆ ಭೇಟಿ ನೀಡಬೇಕು.
ತೆರೆದ ವೆಬ್‌ಪೇಜ್‌ನಲ್ಲಿ ‘2nd PUC Main Examination Results’ ಎಂದು ಬರೆದಿರುವ ಲಿಂಕ್ ಕ್ಲಿಕ್ ಮಾಡಿ.
ಮತ್ತೊಂದು ವೆಬ್‌ಪೇಜ್‌ ತೆರೆಯುತ್ತದೆ.
ಇಲ್ಲಿ ದ್ವಿತೀಯ ಪಿಯುಸಿ ರಿಜಿಸ್ಟರ್‌ ನಂಬರ್ ಕೇಳಲಾಗುತ್ತದೆ.
ರಿಜಿಸ್ಟರ್ ನಂಬರ್ ಟೈಪ್‌ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
ಫಲಿತಾಂಶ ಪ್ರದರ್ಶಿತವಾಗುತ್ತದೆ. ನಂತರ ಅದನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement