ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಸೂಚನೆ: ದಿನೇಶ ಗುಂಡೂರಾವ್

ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪತಂಜಲಿ ಸಂಸ್ಥೆ ಜನರಿಗೆ ಪುರಾವೆ ಇಲ್ಲದೆಯೇ ದಾರಿತಪ್ಪಿಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಆಧಾರ ರಹಿತ ಮಾಹಿತಿಗಳನ್ನು ಯಾವುದೇ ಸಂಶೋಧನೆ ಇಲ್ಲದೆಯೇ ಪ್ರಚಾರ ಮಾಡುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಪತಂಜಲಿ ಉತ್ಪನ್ನಗಳನ್ನು ಪರೀಕ್ಷೆ ನಡೆಸಲು ನಮ್ಮಲ್ಲೂ ಡ್ರಗ್ಸ್ ಕಂಟ್ರೋಲ್‌ ಹಾಗೂ ಆಯುಷ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು.

ಪತಂಜಲಿ ಔಷಧದ ಗುಣಮಟ್ಟದ ಪರೀಕ್ಷೆ ಮಾಡುವುದಕ್ಕೆ ಸೂಚನೆ ನೀಡಿದ್ದೇನೆ. ಔಷಧಕ್ಕೆ ಬೇರೆ ಏನಾದ್ರೂ ಬೆರೆಸಲಾಗುತ್ತದೆಯೆ ಎಂಬ ಪರಿಶೀಲನೆ ಮಾಡುತ್ತೇವೆ. ವರದಿ ಬಂದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.ಜನರಲ್ಲಿ ಏನೋ ನಂಬಿಕೆ ಮೂಡಿಸಿ ಅದನ್ನು ದುರುಪಯೋಗ ಮಾಡಿಕೊಳ್ಳುವುದು ಸರಿಯಲ್ಲ. ಹಾಗೆ ಮಾಡಿದರೆ ಅದು ದೊಡ್ಡ ಅಪರಾಧ ಆಗಲಿದೆ ಎಂದರು.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲು ಔಷಧ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬಾಬಾ ರಾಮದೇವ್ ಅವರು ಆಯುರ್ವೇದ ಮತ್ತು ಭಾರತೀಯ ವೈದ್ಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ಕುರುಡು ನಂಬಿಕೆ ಇದ್ದಾಗ ಹೀಗಾಗುತ್ತದೆ ಎಂದು ದಿನೇಶ ಗುಂಡೂರಾವ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement