ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರು : ಯುಗಾದಿಯಿಂದ ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಮಳೆಯಾಗಿದೆ. ಇದೇವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 13ರ ನಂತರದಿಂದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲವು ಕಡೆ ಗುಡುಗು ಮಿಂಚಿನ ಮಳೆಯೂ ಆಗಬಹುದು ಎಂದು ಅದು ಹೇಳಿದೆ.
ಏಪ್ರಿಲ್ 12, 13, 14, 17 ಮತ್ತು 18 ರಂದು ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಏಪ್ರಿಲ್‌ 10, 11, 15 ಮತ್ತು 16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ಮಳೆ ಬೀಳಬಹುದು ಎಂದು ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement