ದೆಹಲಿ ಮದ್ಯ ನೀತಿ ಪ್ರಕರಣ : ಇ.ಡಿ. ನಂತರ ಕೆ. ಕವಿತಾ ಅವರನ್ನು ಬಂಧಿಸಿದ ಸಿಬಿಐ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರನ್ನು ಜೈಲಿನಲ್ಲಿಯೇ ಬಂಧಿಸಿದೆ. ಕವಿತಾ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶನಿವಾರ ಆಕೆಯನ್ನು ಸಿಬಿಐ ಜೈಲಿನೊಳಗೆ ವಿಚಾರಣೆಗೊಳಪಡಿಸಿತ್ತು.
ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿದ ನಂತರ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿಯನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ಅಧಿಕಾರಿಗಳು ಇತ್ತೀಚೆಗೆ ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆದು ಜೈಲಿನೊಳಗೆ ಕವಿತಾ ಅವರನ್ನು ವಿಚಾರಣೆ ನಡೆಸಿದ್ದರು.

ಸಹ-ಆರೋಪಿ ಬುಚ್ಚಿ ಬಾಬು ಅವರ ಫೋನ್ ಮತ್ತು ಭೂ ವ್ಯವಹಾರಕ್ಕೆ ಸಂಬಂಧಿಸಿ ದಾಖಲೆಗಳು, ಹಣ ವರ್ಗಾವಣೆ ಹಾಗೂ ವಶಪಡಿಸಿಕೊಂಡ ವಾಟ್ಸಾಪ್ ಚಾಟ್‌ಗಳ ಕುರಿತು ಬಿಆರ್‌ಎಸ್ ನಾಯಕಿಯನ್ನು ಪ್ರಶ್ನಿಸಲಾಯಿತು.
ಪ್ರಕರಣದ ಈ ಅಂಶಗಳ ಕುರಿತು ಕವಿತಾ ಅವರನ್ನು ಪ್ರಶ್ನಿಸಲು ಸಿಬಿಐ ಅಧಿಕಾರಿಗಳು ಶನಿವಾರ ತಿಹಾರ್ ಜೈಲಿಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ. ಮಾರ್ಚ್ 15 ರಂದು ಕವಿತಾ ಅವರನ್ನು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ. ಬಂಧಿಸಿತ್ತು.
ಮುಂದಿನ 24 ಗಂಟೆಗಳಲ್ಲಿ ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದ್ದು, ಸಿಬಿಐ ಕಸ್ಟಡಿಗೆ ಕೋರಲಿದೆ. ಭ್ರಷ್ಟಾಚಾರ ತಡೆ ಮತ್ತು 120ಬಿ ಸಂಚಿನ ಅಡಿಯಲ್ಲಿ ಕೇಂದ್ರ ತನಿಖಾ ಸಂಸ್ಥೆ ಅಬಕಾರಿ ಹಗರಣದಲ್ಲಿ ಎಫ್‌ಐಆರ್ ದಾಖಲಿಸಿದ್ದು, ಇಡಿ ತನಿಖೆಯಲ್ಲಿ ಕವಿತಾ ಆಮ್ ಆದ್ಮಿ ಪಕ್ಷಕ್ಕೆ 100 ಕೋಟಿ ರೂಪಾಯಿ ಲಂಚ ನೀಡಿರುವುದು ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ 3-4 ದಿನ ಮಳೆ ಬೀಳುವ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement