ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ ವಿಧಿವಶ

ಬೆಂಗಳೂರು: ನಾಡಿನ ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ (67) ಅವರು ಶುಕ್ರವಾರ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್ ಕೆ ಜೈನ್ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೊಲೀಸರಿಗೆ ನೂತನ ವಸ್ತ್ರಸಂಹಿತೆ : ಅರ್ಚಕರ ತರಹದ ಸಮವಸ್ತ್ರ…! ಅಖಿಲೇಶ ಯಾದವ್ ಆಕ್ಷೇಪ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ನಿಯೋಜನೆಗೊಂಡಿರುವ ಪೊಲೀಸರು ಇನ್ನು ಮುಂದೆ ಧೋತಿ-ಕುರ್ತಾ ಧರಿಸಿ ʼಭಕ್ತ ಸ್ನೇಹಿʼ ವಾತಾವರಣ ಮೂಡಿಸಲಿದ್ದಾರೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ತಿಲಕ ಅಥವಾ ವಿಭೂತಿ ಹಚ್ಚಿಕೊಂಡು, ಕಿತ್ತಳೆ ಬಣ್ಣದ ವಸ್ತ ಧರಿಸಿಕೊಂಡು ಥೇಟ್‌ ಅರ್ಚಕರಂತೆ ಇವರು ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್‌ … Continued

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued

ಲೋಕಸಭೆ ಚುನಾವಣೆ: ಇಂದಿರಾ ಗಾಂಧಿ ಹಂತಕನ ಪುತ್ರ ಫರೀದ್‌ಕೋಟದಿಂದ ಸ್ಪರ್ಧೆ

ನವದೆಹಲಿ : 2024ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನ ಫರೀದ್‌ಕೋಟ್‌ ಕ್ಷೇತ್ರದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹಂತಕರಲ್ಲಿ ಒಬ್ಬನಾಗಿದ್ದ ಬಿಯಾಂತ್‌ ಸಿಂಗ್‌ ಪುತ್ರನಾದ ಸರಬ್‌ಜಿತ್‌ ಸಿಂಗ್‌ ಖಲ್ಸಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಪಿಯುಸಿ ಡ್ರಾಪ್‌ ಔಟ್‌ 45 ವರ್ಷದ ಸರಬ್‌ಜಿತ್‌ ಸಿಂಗ್‌ ಖಲ್ಸಾ ಅವರು 2009 ರಲ್ಲಿ ಭಟಿಂಡಾ, 2014 ರಲ್ಲಿ ಫತೇಗಢ … Continued

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ, ಮಾಜಿ ಪಾಲಿಕೆ ಸದಸ್ಯ ವಿಶ್ವಾದ … Continued

ಸಮುದ್ರದೊಳಗೆ 60 ಅಡಿ ಆಳದ ನೀರಿನಲ್ಲಿ ಮತದಾನ ಜಾಗೃತಿ ಅಭಿಯಾನ | ವೀಕ್ಷಿಸಿ

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ, ಭಾರತೀಯ ಚುನಾವಣಾ ಆಯೋಗವುಮತದಾನ ಜಾಗೃತಿಗೆ ಎಲ್ಲ ಪ್ರಯತ್ನವನ್ನೂ ಮಾಡುತ್ತಿದೆ. ನೀರೊಳಗಿನ ಮತದಾನ ಜಾಗೃತಿ ಮಾಡುವ ಮೂಲಕ ಚುನಾವಣಾ ಆಯೋಗವು ಇತ್ತೀಚೆಗೆ ಒಂದು ವಿಶಿಷ್ಟ ಉಪಕ್ರಮವನ್ನು ಕೈಗೊಂಡಿದೆ. ಅಭಿಯಾನದ ಭಾಗವಾಗಿ, ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ವಿದ್ಯಮಾನವಾದ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಮಹತ್ವವನ್ನು ಎತ್ತಿ ಹಿಡಿಯಲು ನುರಿತ ಸ್ಕೂಬಾ ಡೈವರ್‌ಗಳ ಗುಂಪು … Continued

ಕರ್ನಾಟಕದ 14 ಕ್ಷೇತ್ರಗಳ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು : ಇಂದಿನಿಂದ (ಏಪ್ರಿಲ್‌ 12) ರಾಜ್ಯದಲ್ಲಿ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಆರಂಭವಾಗಿದೆ. ಈ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಅವಕಾಶವಿದೆ. ರಾಜ್ಯದ ಒಟ್ಟು … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಾಂಬ್‌ ಇಟ್ಟವ , ಮಾಸ್ಟರ್​ ಮೈಂಡ್​​ ಪಶ್ಚಿಮ ಬಂಗಾಳದಲ್ಲಿ ವಶಕ್ಕೆ

ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ವರದಿಯಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ಅವರನ್ನು ಬಂಧಿಸಲಾಗಿದೆ. ನಿಖರವಾದ ತನಿಖೆ ಮತ್ತು ಗುಪ್ತಚರ ಸಂಗ್ರಹದ ನಂತರ, … Continued

ದ್ವಿತೀಯ ಪಿಯು ಪರೀಕ್ಷೆ : ಧಾರವಾಡ ಜೆಎಸ್‌ಎಸ್ ಎಸ್‌ ಎಂ ಪಿ ಯು ಕಲಾ-ವಾಣಿಜ್ಯ ಕಾಲೇಜ್‌ ಉತ್ತಮ ಫಲಿತಾಂಶ

ಧಾರವಾಡ: ಧಾರವಾಡ ನಗರದ ಸವದತ್ತಿ ರಸ್ತೆಯ ಮುರಘಾಮಠದ ಬಳಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ ಶೇ. ೮೦ ಆಗಿದೆ. ವಾಣಿಜ್ಯ ವಿಭಾಗದಲ್ಲಿ ಆರತಿ ಬಾಳಗಿ ಶೇ. ೯೭.೬೬ (೫೮೬), ಅನಿಷಾಬಾನು ಪಠಾಣ ಶೇ. ೯೧.೬೬ (೫೫೦) … Continued

ತೀರ್ಪು ಬಾಕಿ ಇರುವ ಪ್ರಕರಣಗಳ ಕುರಿತು ಹೇಳಿಕೆ ನೀಡಲು ಸಾಮಾಜಿಕ ಮಾಧ್ಯಮಗಳ ದುರ್ಬಳಕೆ: ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸತ್ಯ ತಿರುಚಿ ಹೇಳಿಕೆ ನೀಡಲು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ದುರ್ಬಳಕೆ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ನ್ಯಾಯಾಲಯದ ಭುಜಗಳು ಟೀಕೆಗಳನ್ನು ಭರಿಸುವಷ್ಟು ದೊಡ್ಡದಿವೆ. ಆದರೂ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿ ಸತ್ಯ ತಿರುಚುವುದನ್ನು ಸಹಿಸಲಾಗದು ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ (ತಮ್ಮ ನಿವೃತ್ತಿಯ ದಿನ … Continued