ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ, ಮಾಜಿ ಪಾಲಿಕೆ ಸದಸ್ಯ ವಿಶ್ವಾದ ಉಪಸ್ಥಿತರಿದ್ದರು.
ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳೊಂದಿಗೆ ಆಗಮಿಸಿದ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ನಗರದಲ್ಲಿರುವ ಕೋಟೆ ಮಾರಿಕಾಂಬ ದೇವಸ್ಥಾನಕ್ಕೂ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಮಗ ಕಾಂತೇಶ ಅವರಿಗೆ ಟಿಕೆಟ್ ನೀಡದ ಕಾರಣ ಯಡಿಯೂರಪ್ಪ ಕುಟುಂಬದ ವಿರುದ್ಧ ಬಂಡಾಯವೆದ್ದಿರುವ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಬಿಜೆಪಿಯ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಕಣಕ್ಕಿಳಿದಿದ್ದಾರೆ. ಮತ್ತು ಕಾಂಗ್ರೆನಿಂದ ಗೀತಾ ಶಿವರಾಜಕುಮಾರ ಸ್ಪರ್ಧಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಪ್ರತಿ ಮನೆ ಮನೆಗೆ ಹೋಗಿ ಈಶ್ವರಪ್ಪ ಏಕೆ ಚುನಾವಣೆಗೆ ಸ್ಪರ್ಧಿಸಿದ್ದಾರೆ, ಏನು ಅನ್ಯಾಯ ಆಗಿದೆ ಎಂದು ನಮ್ಮ ಕಾರ್ಯಕರ್ತರು ಮತದಾರರಿಗೆ ತಿಳಿಸುತ್ತಾರೆ. ಚುನಾವಣೆ ಬಳಿಕ ಬಿಜೆಪಿಯಲ್ಲಿ ಕೆಲವು ಬದಲಾವಣೆ ಆಗುತ್ತದೆ. ಪಕ್ಷ ಶುದ್ಧೀಕರಣ ಆಗುವ ವಿಶ್ವಾಸ ಇದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕನ್ನಡ ಸಿನಿಮಾ ನಟಿ, ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ ; ಪತಿಯೇ ಕೊಲೆ ಆರೋಪಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement