ಕರ್ನಾಟಕದ 14 ಕ್ಷೇತ್ರಗಳ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು : ಇಂದಿನಿಂದ (ಏಪ್ರಿಲ್‌ 12) ರಾಜ್ಯದಲ್ಲಿ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಆರಂಭವಾಗಿದೆ. ಈ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.
ಏಪ್ರಿಲ್ 19 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಅವಕಾಶವಿದೆ.
ರಾಜ್ಯದ ಒಟ್ಟು 14 ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 7ಕ್ಕೆ ಮತದಾನ ನಡೆಯಲಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement