‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಒಡಿಶಾದ ನವೀನ ಪಟ್ನಾಯಕ್, ಸಿಪಿಐ (ಎಂ) ಮತ್ತು ಇತರ ರಾಜಕೀಯ ಪಕ್ಷಗಳನ್ನು ಅವಲಂಬಿಸಬೇಕಾಗಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಅವರು ‘ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ಲೋಕಸಭಾ ಚುನಾವಣಾ ಭವಿಷ್ಯದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 15-20 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಇಂಡಿಯಾ ಮೈತ್ರಿಕೂಟವು ಸಂಪೂರ್ಣ ಬಹುಮತವನ್ನು ಪಡೆಯದಿರಬಹುದು, ಆದರೆ ಅದೇ ಸಮಯದಲ್ಲಿ, ಎನ್‌ಡಿಎ ಕೂಡ ಸಂಪೂರ್ಣ ಬಹುಮತವನ್ನು ಪಡೆಯುವುದಿಲ್ಲ. ಆದ್ದರಿಂದ, ಇಂಡಿಯಾ (ಬಣ) ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಒಡಿಶಾದ ನವೀನ್ ಪಟ್ನಾಯಕ್, ಸಿಪಿಐ(ಎಂ) ಹಾಗೂ ಇತರ ರಾಜಕೀಯ ಪಕ್ಷಗಳ ಮೇಲೆ ಅವಲಂಬಿತರಾಗಬೇಕಾಗಬಹುದು ಎಂದು ಸಿದ್ದರಾಮಯ್ಯ ಹೇಳಿದರು.
ಎನ್‌ಡಿಎ ಹೆಸರಿನಲ್ಲಿ ಬಿಜೆಪಿಯವರು ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ, ಬಿಜೆಪಿ ಮಾತ್ರ ಅಧಿಕಾರಕ್ಕೆ ಬಂದಿಲ್ಲ, ಅವರು ತಮ್ಮ ಶೇಕಡಾವಾರು ಮತದಾನವನ್ನು ಹೆಚ್ಚಿಸಿಕೊಂಡಿರಬಹುದು, ಆದರೆ ಬಿಜೆಪಿ ಮಾತ್ರ ಅಧಿಕಾರಕ್ಕೆ ಬಂದಿದೆ ಎಂದು ಇದರ ಅರ್ಥವಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕೇವಲ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸದೆ ರಾಜ್ಯ ಸರ್ಕಾರದಲ್ಲಿ ತಮ್ಮದೇ ಆದ ಸ್ಥಾನದ ಬಗ್ಗೆಯೂ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳ ನಂತರ ಅವರು ಮುಖ್ಯಮಂತ್ರಿ ಹುದ್ದೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬಿಟ್ಟುಕೊಡಬೇಕೇ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.
“ಇದು ಎಲ್ಲಾ ಹೈಕಮಾಂಡ್ ನಿರ್ಧಾರವನ್ನು ಅವಲಂಬಿಸಿರುತ್ತದೆ. ಹೈಕಮಾಂಡ್‌ ನಿರ್ಧರಿಸಿದರೆ ನಾನೇ ಮುಂದುವರಿಯುತ್ತೇನೆ. ಇಲ್ಲವಾದಲ್ಲಿ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ನಾಲ್ಕು ವರ್ಷಗಳ ನಂತರ ಚುನಾವಣಾ ರಾಜಕೀಯದಲ್ಲಿ ಉಳಿಯುವುದಿಲ್ಲ ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement