ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ನೀಡಿ ಆದೇಶಿಸಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾ ಬಳಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್​​ಐಎ ಅಧಿಕಾರಿಗಳು ಶುಕ್ರವಾರ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.
ಇಬ್ಬರು ಉಗ್ರರನ್ನು ಎನ್​ಐಎ ಅಧಿಕಾರಿಗಳು ಶನಿವಾರ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಐಟಿ ಕಾರಿಡಾರ್ ಕುಂದಲ ಹಳ್ಳಿ ಕಾಲೋನಿಯಲ್ಲಿರುವ ದಿ ರಾಮೇಶ್ವರ ಕೆಫೆಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಬ್ಯಾಗ್ ನಲ್ಲಿ ಬಾಂಬ್ ಇಟ್ಟು ಮುಸಾವೀರ್ ಎಂಬಾತ ಪರಾರಿಯಾಗಿದ್ದ. ಬಾಂಬ್ ಸ್ಫೋಟದ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಕೃತ್ಯದ ಹಿಂದೆ ಭಯೋತ್ಪಾದಕ ಸಂಘಟನೆ ಕೈವಾಡ ಇರುವುದು ಖಚಿತವಾದ ಹಿನ್ನೆಲೆಯಲ್ಲಿ ಎನ್ಐಎ ಮಧ್ಯಪ್ರವೇಶಿಸಿತ್ತು.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ಬಾಂಬರ್ ಬೆನ್ನು ಹತ್ತಿದ್ದ ಎನ್ಐಎ ಹಾಗೂ ಸಿಸಿಬಿ ಸುಮಾರು 800ಕ್ಕೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲಿಸಿತ್ತು. ಆ ದೃಶ್ಯಾವಳಿಗಳಲ್ಲಿದ್ದ ಶಂಕಿತನಿಗೂ ಮೂರು ವರ್ಷಗಳಿಂದ ತಲೆಮರೆಸಿಕೊಂಡಿರುವ ಮುಸಾವೀರ್ ಹುಸೇನ್ ಶಾಜಿಬ್ ಭಾವಚಿತ್ರಕ್ಕೂ ತಾಳೆಯಾಗಿತ್ತು. ಅಲ್ಲದೆ, ಕೆಫೆಗೆ ಬಾಂಬ್ ಇಡಲು ಬಂದಾಗ ಮುಸಾವೀರ್ ಧರಿಸಿದ್ದ ಕ್ಯಾಪ್ ಆತನ ಪತ್ತೆಗೆ ಮಹತ್ವದ ಸುಳಿವು ನೀಡಿತ್ತು.
ಚೆನ್ನೈ ನಗರದ ಮಾಲ್ ನಲ್ಲಿ ಕ್ಯಾಪ್ ಖರೀದಿಲು ತೆರಳಿದ್ದಾಗ ಆ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಮುಸಾವೀರ್ ಹಾಗೂ ಮತೀನ್ ಸೆರೆಯಾಗಿದ್ದರು. ಕೆಫೆ ಕೃತ್ಯದಲ್ಲಿ ಈ ಇಬ್ಬರ ಪಾತ್ರ ಖಚಿತವಾದ ಬಳಿಕ ಎನ್ಐಎ, ಶಂಕಿತರ ಸುಳಿವು ನೀಡಿದವರಿಗೆ ರೂ.10 ಲಕ್ಷ ಬಹುಮಾನ ಘೋಷಿಸಿತ್ತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement