ವಿಜಯಪುರ ; ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಸಂಭವಿಸಿದ ಕಾರು ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಜಯಪುರದ ಅರ್ಜುನ ಕುಶಾಲ ಸಿಂಗ್ ರಜಪೂತ (32), ಮೇಘರಾಜ ಅರ್ಜುನ ಸಿಂಗ್ ರಜಪೂತ(12), ರವಿನಾಥ ಸುನಿಲಾಲ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ ( 40) ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.
ವಿಜಯಪುರದಿಂದ ಜಮಖಂಡಿ ದೇವಸ್ಥಾನಕ್ಕೆ ಅವರು ಕಾರಿನಲ್ಲಿ ತೆರಳುತ್ತಿದ್ದರು. ಜಮಖಂಡಿಯಿಂದ ಸಿಮೆಂಟ್ ತುಂಬಿದ್ದ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಡಿಕ್ಕಿ ಸಂಭವಿಸಿದೆ.
ನುಜ್ಜುಗುಜ್ಜಾದ ಕಾರಿನೊಳಗಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನೆವಣೆ ಹಾಗೂ ಬಬಲೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement