ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ನೋಡಲು ತೆರಳಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ ಮಾಡಿ 30ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಹಿನ್ನೆಲೆಯಲ್ಲಿ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಏಪ್ರಿಲ್ 14ರಿಂದ ನಿರ್ಬಂಧ ವಿಧಿಸಲಾಗಿದೆ.
ಕಳೆದೆರಡು ದಿನಗಳಿಂದ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದ 30ಕ್ಕೂ ಹೆಚ್ಚು ಪ್ರವಾಸಿಗರ ಮೇಲೆ ಜೇನುದಾಳಿ ಮಾಡಿದ್ದು, ಹೆಚ್ಚಿನವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೇನುದಾಳಿಯಿಂದ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಬೇಸಿಗೆ ರಜೆ ದಿನಗಳಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಆದರೆ ಅವರ ಮೇಲೆ ಕೆರಳಿದ ಜೇನು ಹುಳುಗಳು ದಾಳಿ ಮಾಡಿವೆ. ಹೀಗಾಗಿ ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರಿಗೆ ಜಲಪಾತ ವೀಕ್ಷಣೆ ನಿರ್ಬಂಧಿಸಲಾಗಿದೆ ಎಂದು ಕುಂಬ್ರಾಳ-ಕಂಚನಗದ್ದೆ ಗ್ರಾಮ ಅರಣ್ಯ ಸಮಿತಿಯು ಮಾರ್ಗಗಳಲ್ಲಿ ಫಲಕಗಳನ್ನು ಹಾಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ