ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ತಾಯಿಯೊಬ್ಬಳು ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ.
ಮೃತ ಗಂಗಾದೇವಿ ಜಾಲಹಳ್ಳಿ ವಿಲೇಜ್‌ನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ಏ.8ರಂದು (ಮಂಗಳವಾರ) ರಾತ್ರಿ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆಕೆ ತಾನೇ ಮರುದಿನ ಬುಧವಾರ ಬೆಳಗ್ಗೆ 112ಕ್ಕೆ ಫೋನ್ ಮಾಡಿ ತನ್ನ ಮಕ್ಕಳನ್ನು ತಾನೇ ಕೊಲೆ ಮಾಡಿರುವ ವಿಷಯವನ್ನು ವಿಷಯ ತಿಳಿಸಿದ್ದಳು. ವಿಷಯ ತಿಳಿದ ತಕ್ಷಣ ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಆಕೆಯನ್ನು ವಶಕ್ಕೆ ಪಡೆದಿದ್ದರು.

ಘಟನೆ ಬಳಿಕ, ಆರೋಪಿಯನ್ನು ಬಂಧಿಸಿದ್ದ ಪೊಲೀಸರು ನಾಯ್ಯಾಲಯದ ಎದುರು ಆಕೆಯನ್ನು ಹಾಜರು ಪಡಿಸಿದ ನಂತರ ಅವಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆಕೆಯನ್ನು ನಂತರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಅದೇ ದಿನ ರಾತ್ರಿ ಗಂಗಾದೇವಿ ಜೈಲಿನ ಶೌಚಾಲಯದಲ್ಲಿ ತಾನು ಧರಿಸಿದ್ದ ಸೀರೆಯಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಒಯ್ದರೂ ಆಕೆ ಬದುಕಲಿಲ್ಲ ಎಂದು ಹೇಳಲಾಗಿದೆ.

ಮರಣೋತ್ತರ ಪರೀಕ್ಷೆ ಮಾಡಿ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶ ಮೂಲದ ಗಂಗಾದೇವಿ ಗಂಡನ ಜೊತೆಗೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದಳು. ಆಕೆಯ ಪತಿ ಇತ್ತೀಚೆಗೆ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್​ ಠಾಣೆಗೆ ದೂರು ನೀಡಿ ಗಂಡನನ್ನು ಜೈಲಿಗೆ ಅಟ್ಟಿದ್ದಳು.
ಏಪ್ರಿಲ್ 8ರಂದು ರಾತ್ರಿ ತನ್ನ ಮಗಳು ಲಕ್ಷ್ಮೀ (9) ಹಾಗೂ ಮಗ ಗೌತಮ (7) ಇಬ್ಬರನ್ನು ತಾನೇ ಕೊಲೆ ಮಾಡಿ ಪೊಲೀಸರಿಗೆ ತಾನೇ ಕೊಲೆ ಮಾಡಿರುವ ವಿಷಯ ತಿಳಿಸಿದ್ದಳು ಎನ್ನಲಾಗಿದೆ, ನಂತರ ಜಾಲಹಳ್ಳಿ ಪೊಲೀಸರು ಬಂಧಿಸಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement