ಸಲ್ಮಾನ್ ಖಾನ್ ಮನೆ ದಾಳಿಯ ಹೊಣೆ ಹೊತ್ತ ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್

ಮುಂಬೈ: ನಗರದಲ್ಲಿರುವ ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಭಾನುವಾರ ಬೆಳ್ಳಂಬೆಳಿಗ್ಗೆ ನಡೆದ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯ ಹೊಣೆಯನ್ನು ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೊತ್ತುಕೊಂಡಿದ್ದಾರೆ ಎಂದು ವರದಿಯಾಗಿದೆ.
ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಹೊರಗೆ ಭಾನುವಾರ ಮುಂಜಾನೆ ಇಬ್ಬರು ವ್ಯಕ್ತಿಗಳು ಮೂರು ಸುತ್ತುಗಳಿಗಿಂತ ಹೆಚ್ಚು ಗುಂಡು ಹಾರಿಸಿ ನಂತರ ಬೈಕಿನಲ್ಲಿ ಪರಾರಿಯಾಗಿದ್ದಾರೆ. ಹೆಲ್ಮೆಟ್ ಧರಿಸಿದ್ದ ದಾಳಿಕೋರರನ್ನು ಬಂಧಿಸಲು ಪ್ರದೇಶದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಹಿಂಬಾಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ ನಟ ಸಲ್ಮಾನ್ ಖಾನ್ ಘಟನೆಯ ಸಮಯದಲ್ಲಿ ಮನೆಯಲ್ಲಿದ್ದರು ಎನ್ನಲಾಗಿದೆ. ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಸ್ಥಳೀಯ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಸಮಾನಾಂತರ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಕಳೆದ ವರ್ಷ ಮಾರ್ಚ್‌ ನಲ್ಲಿ ಖಾನ್ ಅವರ ಕಚೇರಿಗೆ ಬೆದರಿಕೆಗಳನ್ನು ಒಳಗೊಂಡ ಇಮೇಲ್ ಬಂದಿತ್ತು. ಮುಂಬೈ ಪೊಲೀಸರು ಗ್ಯಾಂಗ್ ಸ್ಟರ್ ಗಳಾದ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ನಂತರ ಸಲ್ಮಾನ್‌ ಖಾನ್‌ ಅವರಿಗೆ ವೈ+ ಕೆಟಗರಿ ಭದ್ರತೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement