ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸ್ವಗೃಹದಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು. “ರಾತ್ರಿ ಹೊಟ್ಟೆ ನೋವು ಆಗ್ತಾ ಇದೆ ಹೇಳ್ತಾ ಇದ್ದರು. ಅವರಿಗೆ ಲೂಸ್‌ ಮೋಷನ್‌ ಆಗಿತ್ತು. ರಾತ್ರಿ ಸರಿಯಾಗಿ ನಿದ್ದೆ ಮಾಡಿರಲಿಲ್ಲ. ಬೆಳಗ್ಗೆ ಕಾಫಿ ಕುಡಿದಿದ್ದರು. ಕಾಫಿ ಕುಡಿದು ರಡು ಗಂಟೆ ನಿದ್ದೆ ಮಾಡ್ತೀನಿ ಎಂದು ಹೇಳಿ ನಿದ್ದೆ ಮಾಡಿದ್ದರು. ಬಳಿಕ ಎದ್ದೇಳಲಿಲ್ಲ, ಅವರಿಗೆ ಹಾರ್ಟ್‌ ಅಟ್ಯಾಕ್‌ ಆಗಿತ್ತು” ಎಂದು ದ್ವಾರಕೀಶ್‌ ಪುತ್ರ ಯೋಗೇಶ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಚಿತ್ರ ನಿರ್ಮಾಣ, ನಿರ್ದೇಶನದಲ್ಲೂ ಹೆಸರು ಮಾಡಿದ್ದ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು. ಚಂದನವನದಲ್ಲಿ ಹಲವು ದಿಗ್ಗಜ ನಟರೊಂದಿಗೆ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು.
ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಬಂಗ್ಲೆ ಶಾಮರಾವ್ ದ್ವಾರಕಾನಾಥ ಎಂಬುದು ದ್ವಾರಕೀಶ ಅವರ ನಿಜವಾದ ಹೆಸರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಹಾಗೂ ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಫ್ರೌಢಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ಅಭ್ಯಾಸ ಮಾಡಿದ್ದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು. 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಪಡೆದರು.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ದ್ವಾರಕೀಶ್‌ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದೇ ಪ್ರಸಿದ್ಧವಾಗಿತ್ತು. ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್-ವಿಷ್ಣು ಹಲವಾರು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದರು. ಇವರು ಅಭಿನಯದ ಸಿನಿಮಾಗಳು ಸೂಪರ್‌ ಹಿಟ್‌ ಆಗಿದ್ದವು
ರಾಜಕುಮಾರ, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಹೊಂದಿದ್ದ ಅವರು ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಇವರು ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಾಣ ಮಾಡಿದ್ದಾರೆ. 1985ರಲ್ಲಿ ನೀ ಬರೆದ ಕಾದಂಬರಿ ಎಂಬ ಚಿತ್ರಕ್ಕೆ ಮೊದಲ ಬಾರೊ ಸಿನೆಮಾ ಮೊದಲ ಬಾರಿಗೆ ನಿರ್ದೇಶನ ಮಾಡಿದರು. ಇದು ಸೂಪರ್‌ ಹಿಟ್ ಆಗಿತ್ತು. ಡಾನ್ಸ್ ರಾಜ ಡಾನ್ಸ್, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿ ಸುಮಾರು ಸೂಪರ್‌ ಹಿಟ್‌ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ವಿಷ್ಣುವರ್ಧನ್ ಮತ್ತು ದ್ವಾರಕೀಶ ಜೋಡಿಯಾಗಿ ನಟಿಸಿ, ಸೂಪರ್‌ ಹಿಟ್ ಚಿತ್ರಗಳು ಆಪ್ತಮಿತ್ರ, ಕಳ್ಳ ಕುಳ್ಳ, ಕಿಲಾಡಿಗಳು, ಸಿಂಗಾಪುರದಲ್ಲಿ ರಾಜ ಕುಳ್ಳ, ಕಿಟ್ಟು ಪುಟ್ಟು ಹೀಗೆ ಅನೇಕ ಚಿತ್ರಗಳು ಸೇರಿವೆ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, 53 ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ದ್ವಾರಕೀಶ ಅವರಿಗೆ ಸಲ್ಲುತ್ತದೆ.
ಜನ್ಮರಹಸ್ಯ, ಮಂಕುತಿಮ್ಮ, ಪೆದ್ದ ಗೆದ್ದ, ಕಿಟ್ಟು ಪುಟ್ಟು, ಸಿಂಗಾಪುರದಲ್ಲಿ ರಾಜಾಕುಳ್ಳ, ಮನೆ ಮನೆ ಕಥೆ, ಆಫ್ರಿಕಾದಲ್ಲಿ ಶೀಲಾ, ಆಪ್ತಮಿತ್ರ, ಭಲೇ ಹುಡುಗ, ಬಂಗಾರದ ಮನುಷ್ಯ, ಗಲಾಟೆ ಸಂಸಾರ,ಪ್ರಚಂಡ ಕುಳ್ಳ, ಆಪ್ತಮಿತ್ರ, ಗುರುಶಿಷ್ಯರು, ವಿಷ್ಣುವರ್ಧನ, ಕಳ್ಳ ಕುಳ್ಳ, ಮುದ್ದಿನ ಮಾವ, ರಾಯರು ಬಂದರು ಮಾವನ ಮನೆಗೆ, ಆಟಗಾರ, ಚೌಕ, ಪ್ರೀತಿ ಮಾಡು ತಮಾಷೆ ನೋಡು ಮುಂತಾದ ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸಿದ್ದಾರೆ.
ಇತ್ತೀಚಿಗೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಸ್ಮೈಲ್ ಗ್ರೀನ್ಸ್ ವಿಲ್ಲಾದಲ್ಲಿ ತಮ್ಮ ಮಗ ಯೋಗೀಶ ಜೊತೆ ವಾಸವಿದ್ದರು. ನಾಳೆ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿ ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement