ಲೋಕಸಭೆ ಚುನಾವಣೆಗೆ ಗುಲಾಂ ನಬಿ ಆಜಾದ್ ಸ್ಪರ್ಧಿಸಲ್ಲ

ನವದೆಹಲಿ : ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರ ಪಕ್ಷ ಹೇಳಿದೆ. ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. 2022 ರಲ್ಲಿ ಅವರು ಕಾಂಗ್ರೆಸ್ ತೊರೆದ … Continued

ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.20ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲಕುಮಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ಚಿಕ್ಕಬಳ್ಳಾಪುರದಲ್ಲಿ ಸಭೆ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ … Continued

ಬೆಂಗಳೂರು: ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

ಬೆಂಗಳೂರು : ನಗರದಲ್ಲಿ ಕುದುರೆಯಲ್ಲಿ ಗ್ಲಾಂಡರ್ಸ್(Glanders Disease) ಎನ್ನುವ ಮಾರಕ ರೋಗ ಪತ್ತೆಯಾಗಿದೆ. ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ (DG Halli) ಕುದುರೆಯೊಂದರಲ್ಲಿ (Horse) ಮಾರಕ ಗ್ಲಾಂಡರ್ಸ್‌ ರೋಗ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಡಿ.ಜೆ.ಹಳ್ಳಿ ಸುತ್ತಮುತ್ತ `ರೋಗಪೀಡಿತ ವಲಯ’ ಎಂದು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಇಲಾಖೆ ಘೋಷಣೆ ಮಾಡಿದೆ. ಗ್ಲಾಂಡರ್ಸ್‌ ರೋಗ ಸೋಂಕು ರೋಗವಾಗಿದೆ. ರೋಗಗ್ರಸ್ಥ ಕುದುರೆ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು : ಕೊಪ್ಪಳದ ಬಿಜೆಪಿ ಸಂಸದರಾಗಿದ್ದ ಕರಡಿ ಸಂಗಣ್ಣ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಿ ಬಿಜೆಪಿ ಹೊಸಮುಖ ಡಾ. ಬಸವರಾಜ್‌ ಕ್ಯಾವಟರ್‌ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ಮತ್ತು ಸಂಸತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. … Continued

ವೀಡಿಯೊಗಳು..| ದುಬೈನಲ್ಲಿ 1.5 ವರ್ಷಕ್ಕೆ ಬೀಳುವಷ್ಟು ಮಳೆ ಒಂದೇ ದಿನ ಸುರಿಯಿತು…! ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ, ವಿಮಾನಗಳ ಹಾರಾಟ ರದ್ದು

ದುಬೈ : ದುಬೈ ಸೇರಿದಂತೆ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ನ ಹಲವೆಡೆ ದಿಢೀರನೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥವಾಗಿದ್ದು, ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ದುಬೈನಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಮಂಗಳವಾರ ಏಕಾಏಕಿ ಮಳೆಯಾಗಿದ್ದು ಒಂದೂವರೆ ವರ್ಷದಲ್ಲಿ ಸುರಿಯಬೇಕಿದ್ದ ಮಳೆ ಒಂದೇ ದಿನದಲ್ಲಿ ಸುರಿದಿದೆ. ಚಂಡಮಾರುತದ ಪರಿಣಾಮ ಈ ಮಳೆಯಾಗಿದೆ ಎಂದು … Continued

ವೀಡಿಯೊ..| ಅಯೋಧ್ಯೆಯಲ್ಲಿ ರಾಮನವಮಿ ದಿನ ಬಾಲರಾಮನ ಹಣೆಗೆ ʼಸೂರ್ಯ ರಶ್ಮಿಯ ತಿಲಕ ʼ ; ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ನಡೆಯುತ್ತಿರುವ ಮೊದಲ ರಾಮನವಮಿ ಆಚರಣೆ ಸಂಭ್ರಮದಿಂದ ನಡೆಯುತ್ತಿದೆ. ಬಾಲರಾಮ (ರಾಮ ಲಲ್ಲಾ)ನ ದರ್ಶನಕ್ಕಾಗಿ ಲಕ್ಷಾಂತರ ಜನರು ಆಗಮಿಸಿದ್ದಾರೆ. ಇದೇ ವೇಳೆ ಸೂರ್ಯ ರಶ್ಮಿ ಬಾಲರಾಮನ ಹಣೆಗೆ ಸ್ಪರ್ಶಿಸುವ ʼಸೂರ್ಯ ತಿಲಕʼದ ವಿಸ್ಮಯಕಾರಿ ದೃಶ್ಯವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ದೇವಾಲಯದ ಟ್ರಸ್ಟ್‌ನಿಂದ ನಿಯೋಜಿಸಲ್ಪಟ್ಟ ಪ್ರಮುಖ ಸರ್ಕಾರಿ ಸಂಸ್ಥೆಯ ವಿಜ್ಞಾನಿಗಳು … Continued

ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು : ವೃತ್ತಿಪರ ಕೋರ್ಸ್‍ಗಳಿಗೆ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪರೀಕ್ಷೆಗೆ ನಾಳೆಯಿಂದ (ಏಪ್ರಿಲ್‌ 18) ರಿಂದ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕ ಪರೀಕ್ಷಾ … Continued

ಲೋಕಸಭೆ ಚುನಾವಣೆ : ಅಮೇಥಿಯಲ್ಲಿ ಸ್ಪರ್ಧೆ ವಿಚಾರ, ರಾಹುಲ್‌ ಗಾಂಧಿ ಹೇಳಿದ್ದೇನು..?

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದಲೂ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೆಥಿಯಲ್ಲಿ ಸ್ಪರ್ಧಸಿಉವ ಕುರಿತಾದ ಪ್ರಶ್ನೆಗೆ, “ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಮತ್ತು ಕಾಂಗ್ರೆಸ್ ಅಧ್ಯಕ್ಷರು ನನ್ನನ್ನು ಏನು ಮಾಡಲು ಕೇಳುತ್ತಾರೋ ಅದನ್ನು ನಾನು ಮಾಡುತ್ತೇನೆ… ಅಂತಹ ನಿರ್ಧಾರಗಳನ್ನು … Continued

ಹೇಮಾಮಾಲಿನಿ ಬಗ್ಗೆ ಅಸಭ್ಯ ಹೇಳಿಕೆ: ಕಾಂಗ್ರೆಸ್‌ ನಾಯಕ ರಣದೀಪ ಸುರ್ಜೇವಾಲಾಗೆ ಚುನಾವಣಾ ಪ್ರಚಾರದಿಂದ 48 ಗಂಟೆ ನಿಷೇಧ

ನವದೆಹಲಿ : ಕಾಂಗ್ರೆಸ್ ನಾಯಕ ರಣದೀಪ ಸಿಂಗ್‌ ಸುರ್ಜೇವಾಲಾ ಅವರ ಮೇಲೆ ಚುನಾವಣಾ ಪ್ರಚಾರ ಕೈಗೊಳ್ಳದಂತೆ ಚುನಾವಣಾ ಆಯೋಗವು 48 ಗಂಟೆಗಳ ಕಾಲ ನಿಷೇಧ ಹೇರಿದೆ. ಬಿಜೆಪಿ ಸಂಸದೆ ಹಾಗೂ ಅಭ್ಯರ್ಥಿ ಹೇಮಾ ಮಾಲಿನಿ ಅವರ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ ಅವರು ಅಸಭ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮ … Continued