ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು : ಕೊಪ್ಪಳದ ಬಿಜೆಪಿ ಸಂಸದರಾಗಿದ್ದ ಕರಡಿ ಸಂಗಣ್ಣ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಿ ಬಿಜೆಪಿ ಹೊಸಮುಖ ಡಾ. ಬಸವರಾಜ್‌ ಕ್ಯಾವಟರ್‌ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ಮತ್ತು ಸಂಸತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯೂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಪಕ್ಷದ ಬಾವುಟ ನೀಡಿದ ಕರಡಿ ಸಂಗಣ್ಣನವರನ್ನ ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಕರಡಿ ಸಂಗಣ್ಣ ಅವರು, ಇವತ್ತು ನಾನು ಕಾಂಗ್ರೆಸ್ ಸೇರಲು ಸವದಿ ಕಾರಣ. ಸಿದ್ದರಾಮಯ್ಯ ಜೊತೆ ಕೆಲಸ ಮಾಡಿದ್ದೇನೆ. ಡಿ.ಕೆ. ಶಿವಕುಮಾರ ಪಕ್ಷೇತರರವಾಗಿ ಗೆದ್ದಾಗ ನಾನು ಗೆದ್ದಿದ್ದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಸಿದ್ದಾಂತ ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದರು.
ನಾನು ಅಧಿಕಾರಕ್ಕಾಗಿ ಕಾಂಗ್ರೆಸ್ಸಿಗೆ ಬಂದಿಲ್ಲ. ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿದ್ದೇನೆ. ಕಾಂಗ್ರೆಸ್ ‌ಪಕ್ಷ ಸೇರ್ಪಡೆ ಖುಷಿ ಕೊಟ್ಟಿದೆ. ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ, ತ್ಯಾಗ ಬಲಿದಾನ ಮಾಡಿದ ಪಕ್ಷ ಎಂದು ಕಾಂಗ್ರೆಸ್‌ ಪಕ್ಷವನ್ನು ಬಣ್ಣಿಸಿದರು.

ಪ್ರಮುಖ ಸುದ್ದಿ :-   ಡಿಕೆ ಶಿವಕುಮಾರ ಹೇಳಿಕೆಗೆ ಖಂಡಿಸಿ ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳ ಪತ್ರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement