ಬೆಂಗಳೂರು: ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

ಬೆಂಗಳೂರು : ನಗರದಲ್ಲಿ ಕುದುರೆಯಲ್ಲಿ ಗ್ಲಾಂಡರ್ಸ್(Glanders Disease) ಎನ್ನುವ ಮಾರಕ ರೋಗ ಪತ್ತೆಯಾಗಿದೆ. ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ (DG Halli) ಕುದುರೆಯೊಂದರಲ್ಲಿ (Horse) ಮಾರಕ ಗ್ಲಾಂಡರ್ಸ್‌ ರೋಗ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಡಿ.ಜೆ.ಹಳ್ಳಿ ಸುತ್ತಮುತ್ತ `ರೋಗಪೀಡಿತ ವಲಯ’ ಎಂದು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಇಲಾಖೆ ಘೋಷಣೆ ಮಾಡಿದೆ.
ಗ್ಲಾಂಡರ್ಸ್‌ ರೋಗ ಸೋಂಕು ರೋಗವಾಗಿದೆ. ರೋಗಗ್ರಸ್ಥ ಕುದುರೆ ಮೃತಪಟ್ಟಿದ್ದು, ಮತ್ತೊಂದು ಕುದುರೆಗೆ ಈ ಸೋಂಕು ತಗುಲಿದೆ. ಬೆಂಗಳೂರು ಉತ್ತರ ತಾಲೂಕಿನ ಡಿಜೆ ಹಳ್ಳಿಯ ಮೋದಿ ರಸ್ತೆಯಲ್ಲಿರುವ ಖಾಲಿದ್ ಷರೀಫ್ ಎಂಬುವವರಿಗೆ ಸೇರಿದ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಕಾಣಿಸಿಕೊಂಡಿದೆ.

ಹಾಗಾಗಿ, ಡಿ.ಜೆ.ಹಳ್ಳಿ ಕೇಂದ್ರ ಸ್ಥಾನದಿಂದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯ ಎಂದು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಇಲಾಖೆ ಘೋಷಣೆ ಮಾಡಿದೆ. 5 ರಿಂದ 25 ಕಿ.ಮೀ. ಪ್ರದೇಶವನ್ನು ‘ಜಾಗೃತ ವಲಯ’ ಎಂದು ಘೋಷಿಸಲಾಗಿದೆ. ಈ ಪ್ರದೇಶದ ಒಳಗೆ ಮತ್ತು ಹೊರಗೆ ಕುದುರೆ, ಕತ್ತೆ ಹಾಗೂ ಹೇಸರಗತ್ತೆಗಳ ಚಲನವಲನ ನಿರ್ಭಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಕುದುರೆ ಹಾಗೂ ಕತ್ತೆಗಳಿಂದ ಇತರ ಪ್ರಾಣಿಗಳಿಗೂ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಈ ನಿರ್ಬಂಧ ಹಾಕಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು

ಗ್ಲಾಂಡರ್ಸ್ ಒಂದು ಸಾಂಕ್ರಾಮಿಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದ್ದು ಸಾಮಾನ್ಯವಾಗಿ ಕುದುರೆಗಳು, ಕತ್ತೆಗಳು ಹಾಗೂ ಹೇಸರಗತ್ತೆಗಳಿಗೆ ಈ ಸೋಂಕು ಬರುತ್ತದೆ.
ಬರ್ಖೋಲ್ಡೆರಿಯಾ ಮಲ್ಲಿ ಎಂಬ ಬ್ಯಾಕ್ಟೀರಿಯಂದಿಂದ ಈ ರೋಗ ಬರುತ್ತದೆ. ಶ್ವಾಸನಾಳ ಮತ್ತು ಶ್ವಾಸಕೋಶಗಳಲ್ಲಿ ಗಂಟುಗಳು ಮತ್ತು ಹುಣ್ಣು ಉಂಟುಮಾಡುತ್ತದೆ. ಇದನ್ನು ಫಾರ್ಸಿ ಎಂದು ಕರೆಯಲಾಗುತ್ತದೆ. ಇದು ಉಲ್ಬಣವಾದರೆ ಸಾವು ಸಂಭವಿಸುವ ಸಾಧ್ಯತೆಗಳು ಇರುತ್ತವೆ. ಈ ಗ್ಲಾಂಡರ್ಸ್ ರೋಗ ಜೂನೋಟಿಕ್ ಕಾಯಿಲೆಯಾಗಿದ್ದು, ಇದು ಮನುಷ್ಯರಿಗೂ ಹರಡುವ ಸಾಧ್ಯತೆ ಇದೆ. ಸೋಂಕು ಪೀಡಿತ ಪ್ರಾಣಿಯ ಸಂಪರ್ಕಕ್ಕೆ ಬರುವ ಪ್ರಾಣಿ ನಿರ್ವಾಹಕರು ಅಥವಾ ಇತರರಿಗೆ ಸೋಂಕು ತಗಲುವ ಸಾಧ್ಯತೆಯೂ ಇರುತ್ತದೆ ಎಂದು ಹೇಳಲಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement