ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು : ವೃತ್ತಿಪರ ಕೋರ್ಸ್‍ಗಳಿಗೆ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪರೀಕ್ಷೆಗೆ ನಾಳೆಯಿಂದ (ಏಪ್ರಿಲ್‌ 18) ರಿಂದ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ. ಗುರುವಾರ (ಏಪ್ರಿಲ್‌ 18) ಬೆಳಿಗ್ಗೆ 10:30ರಿಂದ 11: 50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. ಏ.19ರಂದು ಬೆಳಿಗ್ಗೆ 10:30ರಿಂದ 11:50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ.
ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಡ್ರೈವಿಂಗ್ ಲೈಸೆನ್ಸ್, ಪಾಸ್‍ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪ್ರವೇಶ ಪತ್ರ ಯಾವುದಾದರೂ ತೆಗೆದುಕೊಂಡು ಹೋಗಬೇಕು.
ಪರೀಕ್ಷೆಗೆ ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು ಎಂದು ತಿಳಿಸಿದೆ.ಪರೀಕ್ಷಾ ಕೋಠಡಿಗೆ ಯಾವುದೇ ರೀತಿಯ ಕೈಗಡಿಯಾರ ತೆಗೆದುಕೊಂಡು ಹೋಗುವಂತಿಲ್ಲ. ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸ್ಲೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್, ವೈಟ್‍ಫ್ಲ್ಯೂಯಿಡ್, ವೈರ್ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್, ಪುಸ್ತಕ ಮೊದಲಾದುವುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವುದನ್ನು ನಿಷೇಧಿಸಿದೆ.

ಪ್ರಮುಖ ಸುದ್ದಿ :-   ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಶಿವಮೂರ್ತಿ ಮುರುಘಾ ಶರಣರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement