ಹೇಮಾಮಾಲಿನಿ ಬಗ್ಗೆ ಅಸಭ್ಯ ಹೇಳಿಕೆ: ಕಾಂಗ್ರೆಸ್‌ ನಾಯಕ ರಣದೀಪ ಸುರ್ಜೇವಾಲಾಗೆ ಚುನಾವಣಾ ಪ್ರಚಾರದಿಂದ 48 ಗಂಟೆ ನಿಷೇಧ

ನವದೆಹಲಿ : ಕಾಂಗ್ರೆಸ್ ನಾಯಕ ರಣದೀಪ ಸಿಂಗ್‌ ಸುರ್ಜೇವಾಲಾ ಅವರ ಮೇಲೆ ಚುನಾವಣಾ ಪ್ರಚಾರ ಕೈಗೊಳ್ಳದಂತೆ ಚುನಾವಣಾ ಆಯೋಗವು 48 ಗಂಟೆಗಳ ಕಾಲ ನಿಷೇಧ ಹೇರಿದೆ.
ಬಿಜೆಪಿ ಸಂಸದೆ ಹಾಗೂ ಅಭ್ಯರ್ಥಿ ಹೇಮಾ ಮಾಲಿನಿ ಅವರ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ ಅವರು ಅಸಭ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ. ಏಪ್ರಿಲ್‌ 16 (ಸೋಮವಾರ) ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿಷೇಧ ಹೇರಲಾಗಿದೆ. ಚುನಾವಣಾ ಪ್ರಚಾರದ ವೇಳೆ ಹೇಮಾ ಮಾಲಿನಿ ವಿರುದ್ಧ ಅಸಭ್ಯ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಸುರ್ಜೇವಾಲ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಈ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವು ವಿಧಿಸಿದ ಮೊದಲ ಪ್ರಚಾರ ನಿಷೇಧ ಇದಾಗಿದೆ. “ಭಾರತದ ಸಂವಿಧಾನದ 324 ನೇ ವಿಧಿ ಅಡಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್‌ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಾದ ಮುದ್ರಣ, ವಿದ್ಯುನ್ಮಾನ, ಸಾಮಾಜಿಕ ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ತಡೆಹಿಡಿಯಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ....| ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳ ಸಮೇತ ಮನೆಗೆ ಕರೆತಂದ ತಂದೆ...!

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement