ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued

ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ಕರಾವಳಿಯಲ್ಲಿ ಒಣಹವೆ ಮುಂದುವರಿದಿದ್ದರೆ, ಹಲವೆಡೆ ಮಳೆಯಾಗಿದೆ. ಏಪ್ರಿಲ್‌ 19 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, … Continued

ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಸಿಡಲಿಗೆ ಓರ್ವ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಲವೆಡೆ ಜಾನುವಾರುಗಳು ಪ್ರಾಣಕಳೆದುಕೊಂಡಿದೆ. ಅಲ್ಲದೆ, ಗಾಳಿಮಳೆಯಿಂದಾಗಿ ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ ಸ್ಮಾರಕಕ್ಕೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಸಂಜೆ ಗುಡುಗು-ಸಿಡಿಲ ಅಬ್ಬರದೊಂದಿಗೆ ಭಾರೀ ಗಾಳಿ ಮಳೆ ಸುರಿದಿದೆ. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ … Continued

ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ ಒಳಗೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಎಂಸಿಎ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದ್ದು, ಈಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಎಂದು ಹೇಳಲಾಗಿದೆ. ಈ ದುಷ್ಕೃತ್ಯ ಎಸೆಗಿರುವ … Continued

ವೀಡಿಯೊ…: ಭಾರೀ ಮಳೆ-ಬಿರುಗಾಳಿಯ ನಡುವೆ ಹಸಿರು ಬಣ್ಣಕ್ಕೆ ತಿರುಗಿದ ದುಬೈನ ಆಕಾಶ…!

ಕಳೆದ ಎರಡು ದಿನಗಳಿಂದ ದುಬೈ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಭೂತಪೂರ್ವ ಹವಾಮಾನ ಪರಿಸ್ಥಿತಿ ಎದುರಾಗಿದೆ. ಜಲ ಪ್ರಳಯವು ವ್ಯಾಪಕ ಅವ್ಯವಸ್ಥೆಗೆ ಕಾರಣವಾಗಿದೆ. ಇದು ವಿಮಾನ ಪ್ರಯಾಣದ ಮೇಲೆ ಪರಿಣಾಮ ಬೀರಿತು ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಾದ್ಯಂತ ರಸ್ತೆಗಳು ಮುಳುಗಿದವು. ಇದು ದುಬೈನ ಸಾಮಾನ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ವಿಮಾನ ನಿಲ್ದಾಣದಲ್ಲಿ ನೀರು ತುಂಬಿದ ಪರಿಣಾಮ … Continued

ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಏಪ್ರಿಲ್ 18 ರಂದು ಜಪ್ತಿ ಮಾಡಿದೆ. ಲಗತ್ತಿಸಲಾದ ಆಸ್ತಿಗಳಲ್ಲಿ ಕುಂದ್ರಾ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಅವರ ಮುಂಬೈನ ಜುಹುದಲ್ಲಿನ ವಸತಿ … Continued

ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ತುಮಕೂರು : ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 4೨ ಮಂದಿ ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಕುಣಿಗಲ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್‌ ತಾಲೂಕಿನ ಅಮೃತೂರು ಪೊಲೀಸ್ ಠಾಣೆ … Continued

ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

ಮಂಡ್ಯ  : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ಮಕ್ಕಳಾದ ತ್ರಿಶೂಲ್‌ ಮತ್ತು ತ್ರಿಶಾ ಎಂಬವರು ಮೃತರಾದ ಮಕ್ಕಳು ಎಂದು ಗುರುತಿಸಾಗಿದೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದ್ದು. … Continued

ವೀಡಿಯೊ…| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

ಇತ್ತೀಚೆಗೆ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ಪ್ರಕರಣದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ನಂತರ ಮುಂಭಾಗದ ಟೈರ್ ಅಡಿಯಲ್ಲಿ … Continued

‘ಇದು ಸಾಮಾನ್ಯ ಚುನಾವಣೆಯಲ್ಲ’ : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ: ಅಭೂತಪೂರ್ವ ಕ್ರಮದಲ್ಲಿ, ಮುಂಬರುವ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುವ ಎಲ್ಲಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆ. ಈ ಉಪಕ್ರಮವು ಬಿಜೆಪಿಯ ಸಮಗ್ರ ಕಾರ್ಯತಂತ್ರದ ಭಾಗವಾಗಿದ್ದು, ಕ್ಷೇತ್ರಗಳಾದ್ಯಂತ ಪ್ರಧಾನಿ ಸಂದೇಶದ ವ್ಯಾಪಕ ಪ್ರಚಾರಕ್ಕಾಗಿ ಈ ಉಪಕ್ರಮ ಬಂದಿದೆ. ಮಾಹಿತಿಯ ಪ್ರಕಾರ, ಅಭ್ಯರ್ಥಿಗಳು ಪತ್ರವನ್ನು ಸ್ವೀಕರಿಸಿದ … Continued