ತುಮಕೂರು : ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 4೨ ಮಂದಿ ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡವತ್ತಿ ಗ್ರಾಮ ಸಮೀಪದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಬುಧವಾರ ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕ ವಿತರಣೆ ಮಾಡಲಾಗಿತ್ತು. ಅದನ್ನು ಸೇವಿಸಿದ ಕೆಲವರಿಗೆ ಸಂಜೆಯಾಗುತ್ತಿದ್ದಂತೆ ಕೆಲವರಿಗೆ ವಾಂತಿ, ಭೇದಿ ಶುರುವಾಗಿದೆ. ಬಳಿಕ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಹಲವರವನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ವೈದ್ಯರ ತಂಡ ಚಿಕಿತ್ಸೆ ನೀಡಯತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ