ಬೆಂಗಳೂರು : ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಅವರು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್ ಎಂದು ಅವರು ತಿಳಿಸಿದ್ದಾರೆ.
ಇದರಲ್ಲಿ ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ವಿದ್ಯಾರಣ್ಯಪುರ ಪೊಲೀಸರಿಂದ ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ