ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ ಒಳಗೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಎಂಸಿಎ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದ್ದು, ಈಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಎಂದು ಹೇಳಲಾಗಿದೆ. ಈ ದುಷ್ಕೃತ್ಯ ಎಸೆಗಿರುವ ಯುವಕ ಅದೇ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು ಫಯಾಜ್ ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿ ಪರಾರಿಯಾಗುತ್ತಿದ್ದ ಫಯಾಜ್ ನನ್ನು ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಫಯಾಜ್ ಸವದತ್ತಿ ಮೂಲದ ಯುವಕನಾಗಿದ್ದು, ವಿದ್ಯಾರ್ಥಿನಿಗೆ 9 ಬಾರಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.

ತಕ್ಷಣವೇ ಸ್ಥಳದಲ್ಲಿದ್ದವರು ವಿದ್ಯಾರ್ಥಿನಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಘಟನೆಯಿಂದ ತೀವ್ರ ರಕ್ತಸ್ರಾವ ಉಂಟಾಗಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಸಂಬಂಧ ವಿದ್ಯಾನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿನಿಯ ಮೃತದೇಹವನ್ನು ಕಿಮ್ಸ್​ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ಕೊಲೆಯಾದ ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್‌ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದು, ಫಯಾಜ್ ಬಿಸಿಎನಲ್ಲಿ ಹಳೆಯ ಸಹಪಾಠಿ ಎನ್ನಲಾಗಿದೆ.  ಪ್ರೀತಿ ಮಾಡುವಂತೆ ದುಂಬಾಲು ಬಿದ್ದಿದ್ದನಂತೆ. ಆದರೆ ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement