ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ಕರಾವಳಿಯಲ್ಲಿ ಒಣಹವೆ ಮುಂದುವರಿದಿದ್ದರೆ, ಹಲವೆಡೆ ಮಳೆಯಾಗಿದೆ. ಏಪ್ರಿಲ್‌ 19 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಏಪ್ರಿಲ್‌ 20 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನದಲ್ಲಿ ಮಳೆಯಾಗುವ ಸಂಭವವಿದೆ.
ಭಾನುವಾರ (ಏಪ್ರಿಲ್‌ 21) ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏ.22 ಮತ್ತು 23ರಂದು ರಾಜ್ಯದಾದ್ಯಂತ ಅಲ್ಲಲ್ಲಿ ಹಗುರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏ.19ರಂದು ಕರಾವಳಿ ಭಾಗದ ಒಂದೆರಡು ಪ್ರದೇಶಗಳಲ್ಲಿ, 19ರಿಂದ 21ರ ವರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ರಭಸವಾಗಿ ಜೋರಾದ ಗಾಳಿ ಬೀಸಲಿದೆ’ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement