ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಸಿಡಲಿಗೆ ಓರ್ವ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಲವೆಡೆ ಜಾನುವಾರುಗಳು ಪ್ರಾಣಕಳೆದುಕೊಂಡಿದೆ. ಅಲ್ಲದೆ, ಗಾಳಿಮಳೆಯಿಂದಾಗಿ ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ ಸ್ಮಾರಕಕ್ಕೆ ಹಾನಿಯಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಸಂಜೆ ಗುಡುಗು-ಸಿಡಿಲ ಅಬ್ಬರದೊಂದಿಗೆ ಭಾರೀ ಗಾಳಿ ಮಳೆ ಸುರಿದಿದೆ. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ ಸ್ಮಾರಕಕ್ಕೆ ಹಾನಿಯಾಗಿದೆ. ಹಲವು ಕಡೆಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿದೆ.
ಸಿಡಿಲಿನ ಹೊಡೆತಕ್ಕೆ ಮೆಹತರ ಪಾರಂಪರಿಕ ಸ್ಮಾರಕದ ಪ್ರವೇಶ ದ್ವಾರದ ಕಮಾನಿನ ಮೇಲ್ಭಾಗದ ಸ್ಮಾರಕದ ಮೇಲಿನಿಂದ ಕಲ್ಲುಗಳು ಬಿದ್ದು ಕೆಳಗೆ ನಿಲ್ಲಿಸಲಾಗಿದ್ದ ಕಾರುಗಳು ಜಖಂಗೊಂಡಿವೆ. ಆದರೆ ಮಳೆಯಿಂದ ಜನರು ಕೊಂಚ ನಿಟ್ಟುಸಿರುಬಿಟ್ಟಿದ್ದಾರೆ.

ಕೊಪ್ಪಳ ಜಿಲ್ಲೆ‌ ಕುಷ್ಟಗಿ ತಾಲೂಕಿನ ಜೂಲಕಟ್ಟಿಯಲ್ಲಿ ಹೊಲದಲ್ಲಿ ಕೂಲಿಕಾರರೊಂದಿಗೆ ಕೆಲಸಕ್ಕೆ‌ ತೆರಳಿದ್ದ ರೈತರೊಬ್ಬರು ಸಿಡಲಿಬಡಿದು ಮೃತಪಟ್ಟಿದ್ದಾರೆ. ಅಮೋಘಸಿದ್ದಯ್ಯ (32) ಸಿಡಿಲು ಬಡಿದು ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸಂಜೆ ಒಮ್ಮೆಗೆ ಸುರಿದ ಗಾ-ಮಳೆ‌ಯಿಂದ‌ ರಕ್ಷಿಸಿಕೊಳ್ಳಲು ಗಿಡದ‌ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಹಾಗೂ ಜೋರಾದ ಗಾಳಯಿಂದ ಕೂಡಿದ ಮಳೆ ಸುರಿದಿದೆ. ಸುಮಾರು ಒಂದು ತಾಸು ಮಳೆ ಸುರಿದಿದೆ.
ಹಾತಲಗೇರಿ ನಾಕಾ, ಬಳ್ಳಾರಿ ಗೇಟ್, ತೋಂಟದಾರ್ಯ ಮಠದ ರಸ್ತೆ ಸೇರಿ ಹಲವೆಡೆ ರಸ್ತೆ ಮೇಲೆ ನೀರು ನಿಂತಿತ್ತು. ಕೆಲವೆಡೆ ಗಿಡ-ಮರಗಳು ಧರೆಗುರುಳಿವೆ.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ಬಾಗಲಕೋಟೆ ಜಿಲ್ಲೆಯ ಹಲವೆಡೆ ಧಾರಾಕಾರ ವರುಣನ ಅಬ್ಬರ ಜೋರಾಗಿದ್ದು, ತೇರದಾಳ ಪಟ್ಟಣ, ಮುಧೋಳ ತಾಲೂಕಿನ ರನ್ನ ಬೆಳಗಲಿಯಲ್ಲಿ ಭರ್ಜರಿ ಮಳೆಯಾಗಿದೆ. ರನ್ನ ಬೆಳಗಲಿ ಗ್ರಾಮದಲ್ಲಿ ಒಂದು ತಾಸಿನಿಂದ ಸುರಿದ ಧಾರಾಕಾರ ಮಳೆ ಸುರಿದಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಮಳೆ ಆಗಿದೆ. ಗುಡುಗು, ಸಿಡಿಲು ಸಮೇತ ಧಾರಾಕಾರ ಮಳೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೊರೆಬೈಲು ಗ್ರಾಮದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಭಾರಿ ಗಾಳಿ, ಮಳೆಗೆ ಅಕೇಶಿಯಾ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಹಾವೇರಿಯಲ್ಲಿ ಗಾಳಿ ಮಳೆಗಾಳಿ ಮಳೆಯ ಅಬ್ಬರಕ್ಕೆ ಹಾವೇರಿ ಹೊರವಲಯದಲ್ಲಿ ಚುನಾವಣೆ ಹಿನ್ನೆಲೆ ನಿರ್ಮಿಸಿದ್ದ ಚೆಕ್ ಪೋಸ್ಟ್ ಗೆ ಹಾನಿಯಾಗಿದೆ. ಚೆಕ್ ಪೊಸ್ಟ್ ನಲ್ಲಿ ಹಾಕಿದ್ದ ತಗಡು ಹಾರಿ ಬಿದ್ದಿದೆ. ಅಲ್ಲದೆ, ದಿಡಗೂರು ಗ್ರಾಮದಲ್ಲಿ ಸಿಡಿಲು ಬಡಿದು ನಾಲ್ಕು ಕುರಿಗಳ ಸಾವಿಗೀಡಾಗಿವೆ.
ದಾವಣಗೆರೆ ತಾಲೂಕಿನ ಸುತ್ತಮುತ್ತ ಗುರುವಾರ ಸಂಜೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿದಿದೆ. ಈಚಘಟ್ಟ ಗ್ರಾಮದ ರೈತ ಪಾಪ್ಯಾನಾಯ್ಕ ಮತ್ತು ರೇವತಿಬಾಯಿ ಎಂಬುವರು ಮೇಕೆಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದರು. ಮಳೆ ಆರಂಭವಾದಾಗ ಮೇಕೆಗಳು ಮರದ ಕೆಳಗೆ ಬಂದು ನಿಂತ ವೇಳೆ ಸಿಡಿಲು ಬಡಿದು ಮೃತಪಟ್ಟಿವೆ. ಸಿಡಿಲು ಬಡಿದು 16 ಹೆಣ್ಣು ಮೇಕೆ, 9 ಗಂಡು ಮೇಕೆ ಮೃತಪಟ್ಟಿವೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ಅಶ್ಲೀಲ ವೀಡಿಯೊ ಪ್ರಕರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ರಾಜ್ಯ ಸರ್ಕಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement