ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

ಮಂಡ್ಯ  : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ಮಕ್ಕಳಾದ ತ್ರಿಶೂಲ್‌ ಮತ್ತು ತ್ರಿಶಾ ಎಂಬವರು ಮೃತರಾದ ಮಕ್ಕಳು ಎಂದು ಗುರುತಿಸಾಗಿದೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದ್ದು. ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಾಹನದಲ್ಲಿ ಬೆಟ್ಟಹಳ್ಳಿಗೆ ತಂದಿದ್ದ ಐಸ್‌ ಕ್ರೀಂ ಖರೀದಿಸಿ ತಿಂದ ಕೆಲ ಹೊತ್ತಿನ ಬಳಿಕ ಮಕ್ಕಳು ಅಸ್ವಸ್ಥಗೊಂಡಿವೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತರಾದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಆದರೆ ಇದೇ ವಾಹನದಲ್ಲಿ ಗ್ರಾಮದ ಇನ್ನೂ ಹಲವರು ಐಸ್‌ಕ್ರೀಂ ಖರೀದಿಸಿ ತಿಂದಿದ್ದರು. ಬೇರೆಯವರಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿಲ್ಲ ಎಂದು ಹೇಳಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement