ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ಇಂಫಾಲ್ : 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿದ್ದಾರೆ.
ಬಿಷ್ಣುಪುರ ಜಿಲ್ಲೆಯ ಥಮನ್‌ಪೋಕ್ಪಿ ಮತದಾನ ಕೇಂದ್ರದಲ್ಲಿ ಕೇಂದ್ರದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಮತಗಟ್ಟೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದೆ. ಆಗ ಜನ ಗುಂಡಿನ ದಾಳಿಯಿಂದ ಬಚಾವಾಗಲು ದಿಕ್ಕಾಪಾಲಾಗಿ ಓಡಿದ್ದಾರೆ. ಘಟನೆಯ ದೃಶ್ಯವನ್ನು ವ್ಯಕ್ತಿಯೊಬ್ಬರು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಮಣಿಪುರದಲ್ಲಿ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಅದರಂತೆ ಶುಕ್ರವಾರ (ಏಪ್ರಿಲ್‌ ೧೯) ಮೊದಲ ಹಂತದ ಮತದಾನ ಆರಂಭಗೊಂಡಿದೆ. ಮಣಿಪುರದಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಆದರೆ ಇದರ ಹೊರತಾಗಿಯೂ ದುಷ್ಕರ್ಮಿಗಳು ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಥಮನ್‌ಪೋಕ್ಪಿಯಲ್ಲಿ ಗುಂಡಿನ ದಾಳಿ ನಡೆಸಿ ಇವಿಎಂ ಮೆಷಿನ್ ಒಡೆದು ಹಾಕಿದ್ದಾರೆ ಎನ್ನಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಮತಗಟ್ಟೆಗಳ ಸುತ್ತ ಹೆಚ್ಚಿನ ಭದ್ರತಾ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮಣಿಪುರದಲ್ಲಿ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು ಇಲ್ಲಿ ಕೂಡ ಕೆಲ ಸೂಕ್ಷ್ಮ ಮತಗಟ್ಟೆಗಳು ಇರುವುದರಿಂದ ಹೆಚ್ಚಿನ ಭದ್ರತೆ ಮಾಡಬೇಕಿದೆ.
ಇಂಫಾಲ್ ಕಣಿವೆಯಲ್ಲಿ ವಾಸಿಸುವ ಬಹುಸಂಖ್ಯಾತ ಮೈಥೀಸ್ ಮತ್ತು ಕುಕಿ-ಜೋ ಬುಡಕಟ್ಟು ಸಮುದಾಯದ ನಡುವೆ ಕಳೆದ ಒಂದು ವರ್ಷದಿಂದ ಮಣಿಪುರ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement