ದಾಂಡೇಲಿ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು

ಕಾರವಾರ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತಪಟ್ಟ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಒಟ್ಟು 8 ಜನರು ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಕಾಳಿ ನದಿಯಲ್ಲಿ ನೀರಿಗಿಳಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನು ರಕ್ಷಿಸಲು ಹೋಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ನೀರಿನಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಮೃತರನ್ನು ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ‌ ಅಹ್ಮದ್(15), ಅಬೀದ್ ಅಹ್ಮದ್(12) ಎಂದು ಗುರುತಿಸಲಾಗಿದೆ.
ಮೃತರಲ್ಲಿ ಮೂವರು ಹುಬ್ಬಳ್ಳಿಯವರಾಗಿದ್ದು, ಇನ್ನು ಮೂವರು ಬೆಂಗಳೂರಿಗರಾಗಿದ್ದಾರೆ  ಎನ್ನಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ನೆಂಟರ ಮನೆಗೆ ಬಂದಿದ್ದು, ಎಲ್ಲರೂ ಸೇರಿ ಪ್ರವಾಸಕ್ಕೆಂದು ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನೊಬ್ಬರು ರಕ್ಷಣೆ ಮಾಡುವುದಕ್ಕೆಂದು ತೆರಳಿ ಎಲ್ಲರೂ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ಅಕೋಡಾದಲ್ಲಿ ಈಜಾಡಲೆಂದು ನದಿಗಳಿದಿದ್ದ 6 ಜನರ ಪೈಕಿ  ಮೊದಲು ಬಾಲಕಿಯೊಬ್ಬಳು  ನೀರಲ್ಲಿ ಕೊಚ್ಚಿ ಹೋಗುತ್ತಿದ್ದಳು. ಇದನ್ನು ಗಮನಿಸಿದ ಉಳಿದ ಐವರು ಆಕೆಯನ್ನು ರಕ್ಷಣೆ ಮಾಡಲು ಮುಂದಾದರು. ಆದರೆ, ನೀರಿನ ಸೆಳೆತದಿಂದಾಗಿ ಎಲ್ಲರೂ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ದಾಂಡೇಲಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದಾಂಡೇಲಿ ನಗರದ ಜಂಗಲ್ ಲಾಡ್ಜ್ ಹಾಗೂ ಸ್ಥಳೀಯರ ಸಹಕಾರದಲ್ಲಿ ಶವಗಳನ್ನು ನದಿಯಿಂದ ಹೊರತೆಗೆದಿದ್ದಾರೆ.ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿ ಆಸ್ಪತ್ರೆಗೆ ಶವಗಳನ್ನು ಸ್ಥಳಾಂತರ ಮಾಡಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement