ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ : ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ರಾಜ್ಯಾದ್ಯಂತ ಕಾನೂಣು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಳೆ ಸೋಮವಾರ (ಏಪ್ರಿಲ್ 22) ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿರುವ ಅವರು, ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ. ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ ಎಂದು ಹೇಳಿದ್ದಾರೆ.

ಆದರೆ ರಾಜ್ಯದ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದನ್ನು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ. ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ಬಿಜೆಪಿ ಸಿದ್ಧಾಂಕ್ಕಾಗಿ ಜನ್ಮ ತಾಳಿದ ಪಕ್ಷ, ನಮ್ಮ ಆದ್ಯತೆ ಏನಿದ್ದರೂ ‘ಧ್ಯೇಯ’ಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕನ್ನಡ ಸಿನಿಮಾ ನಟಿ, ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ ; ಪತಿಯೇ ಕೊಲೆ ಆರೋಪಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement