ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೊ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ.
ಏಪ್ರಿಲ್‌ 21ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೀದರ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಏಪ್ರಿಲ್‌ 22ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement